ಪಿಎಚ್‌ಸಿ) ಪ್ರತಿನಿತ್ಯ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವುದರ ಜತೆಗೆ ವಿಶ್ವಬ್ಯಾಂಕ್‌ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಸಚಿವ ಸುಧಾಕರ್ ಹೇಳಿದ್ದಾರೆ

ಬೆಂಗಳೂರು (ನ.13): ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಪ್ರತಿನಿತ್ಯ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವುದರ ಜತೆಗೆ ವಿಶ್ವಬ್ಯಾಂಕ್‌ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸೌಧದಲ್ಲಿ ಗುರುವಾರ ವೈದ್ಯ ಶಾಸಕರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2,300ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕು ಎಂಬ ನಿಯಮ ಇದೆ. ಆದರೆ, ಕೆಲ ಜಿಲ್ಲೆಯಲ್ಲಿ ಈ ನಿಯಮದಂತೆ ಆಸ್ಪತ್ರೆ ಇಲ್ಲ. ವಿಶ್ವಬ್ಯಾಂಕ್‌ ಸಹಕಾರದಿಂದ ಮೂರು ವರ್ಷದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಅಲ್ಲದೇ, ಪ್ರಸ್ತುತ ಇರುವ ಪಿಎಚ್‌ಸಿಗಳನ್ನು 24/7 ಸೇವೆ ನೀಡುವ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಸಕ್ರಿಯ ಕೊರೋನಾ ಕೇಸ್‌ 30 ಸಾವಿರಕ್ಕಿಂತ ಇಳಿಕೆ..! ...

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆರಂಭವಾಗಿ ದೊಡ್ಡ ಆಸ್ಪತ್ರೆಗಳವರೆಗೂ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. 1,250 ಎಂಬಿಬಿಎಸ್‌ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಇದರೊಂದಿಗೆ 1,500 ಹಿರಿಯ ರೆಸಿಡೆಂಟ್‌ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್‌ ಅಥವಾ ಜನವರಿ ವೇಳೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ ಎಂದು ತಿಳಿಸಿದರು.

ಇದಕ್ಕಾಗಿ ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ. ಕೆಲ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಹೋಗಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಬಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಈ ಹೊಸ ನೀತಿಯಲ್ಲಿ ಸೇರಿಸಲಾಗುವುದು. 1,250 ಎಂಬಿಬಿಎಸ್‌ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಇದರೊಂದಿಗೆ 1,500 ಹಿರಿಯ ರೆಸಿಡೆಂಟ್‌ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್‌ ಅಥವಾ ಜನವರಿ ವೇಳೆಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್‌ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಉದ್ದೇಶವಿದ್ದು, ಅದಕ್ಕೆ ತಕ್ಕಂತೆ ನೀತಿಯಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದ ಅವರು, ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಬೆಂಗಳೂರಲ್ಲಿ ಕೋವಿಡ್‌ ಮರಣ ಪ್ರಮಾಣ ಶೇ.0.99ರಷ್ಟುಇಳಿಕೆಯಾಗಿದೆ. ಜನರು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಂಡು ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದರು.