ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರು (ಡಿ.19): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ನಿಧಿಯಡಿ ಕರ್ನಾಟಕವು ಇಷ್ಟು ಪರಿಹಾರಕ್ಕೆ ಅರ್ಹವಾಗಿದೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಪ್ರಧಾನಿಯನ್ನು ಟೀಕಿಸುತ್ತಿದ್ದ ಸಿದ್ದರಾಮಯ್ಯ, ಕರ್ನಾಟಕದ ಸಚಿವರು ಭೇಟಿ ಮಾಡಲು ಯತ್ನಿಸಿದರೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ ಗೋವಿಂದ ಕಾರಜೋಳಗೆ ದಲಿತ ಮುಖಂಡರಿಂದಲೇ ತರಾಟೆ!
ರಾಜ್ಯ ಸರ್ಕಾರವು ರೈತರಿಗೆ ಸಹಾಯ ಮಾಡಲು ತಕ್ಷಣದ ಕ್ರಮವಾಗಿ ಆರ್ಥಿಕ ಸಹಾಯದ ಮೊದಲ ಕಂತಾಗಿ ಪ್ರತಿ ರೈತರಿಗೆ 2,000 ರೂಪಾಯಿಗಳನ್ನು ನೀಡುವುದಾಗಿ ಪ್ರಕಟಿಸಿದೆ. ಬೆಳಗಾವಿ ಅಧಿವೇಶನದಲ್ಲಿ, ರೈತರು ಅಸಲು ಮೊತ್ತವನ್ನು ಪಾವತಿಸಿದರೆ ರಾಜ್ಯ ಸರ್ಕಾರವು ಕೃಷಿ ಸಾಲದ ಮೇಲಿನ ಬಡ್ಡಿ ಪಾವತಿಯನ್ನು ಮನ್ನಾ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸರ್ಕಾರವು 236 ರಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ ಮತ್ತು 48.19 ಲಕ್ಷ ಹೆಕ್ಟೇರ್‌ಗಳಲ್ಲಿನ ಬೆಳೆ ನಷ್ಟವು 40,000 ಕೋಟಿ ರೂಪಾಯಿ ಎಂದು ಅಂದಾಜಿಸಿದೆ.
ಮುಖ್ಯಮಂತ್ರಿಗಳಾದ ಬಳಿ ಸಿದ್ದರಾಮಯ್ಯನವರು ಈಗ ಎರಡನೇ ಬಾರಿ ಅಧಿಕೃತವಾಗಿ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಕಳೆದ ಬಾರಿ ಅವರ ಮೊದಲ ಭೇಟಿ ಸೌಜನ್ಯದ ಭೇಟಿಯಾಗಿತ್ತು. ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಔಪಚಾರಿಕ ಪತ್ರ ಬರೆದು, ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ನಿಭಾಯಿಸಲು ಎನ್‌ಡಿಆರ್‌ಎಫ್ ಅಡಿಯಲ್ಲಿ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಕರ್ನಾಟಕಕ್ಕೆ ಎನ್‌ಡಿಆರ್‌ಎಫ್ ನಿಧಿಯಿಂದ 18,171 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ರೈತರಿಗೆ ಸಬ್ಸಿಡಿಗಳನ್ನು ಒದಗಿಸಲು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ಆತಂಕಕಾರಿಯಾಗಿ ಕಡಿಮೆಯಾಗಿರುವುದರಿಂದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರದ ಆರ್ಥಿಕ ಬೆಂಬಲದ ಅಗತ್ಯವಿದೆ ಎಂದು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.
ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?
ಇಂದು ಬೆಳಗ್ಗೆ 11 ಗಂಟೆಗೆ ಕೃಷ್ಣ ಭೈರೇಗೌಡ ಅವರೊಂದಿಗೆ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಮತ್ತು ಎಂಎನ್‌ಆರ್‌ಇಜಿಎ ಅಡಿಯಲ್ಲಿ ಪ್ರತಿ ವರ್ಷ ತಲಾ 100 ರಿಂದ 150 ಮಾನವ ದಿನಗಳನ್ನು ಹೆಚ್ಚಿಸುವುದು ಸೇರಿದಂತೆ ವಿವಿಧ ವಿಷಯಗಳು ಚರ್ಚೆಗೆ ಬರುವ ಸಾಧ್ಯತೆಯಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಸರಣಿ ಪೋಸ್ಟ್‌ಗಳ ಮೂಲಕ ಸಿದ್ದರಾಮಯ್ಯ ಅವರು ರಾಜಕೀಯವನ್ನು ಬದಿಗಿಟ್ಟು ರಾಜ್ಯ ಮತ್ತು 6.5 ಕೋಟಿ ಕನ್ನಡಿಗರ ಹಿತಾಸಕ್ತಿಗಳನ್ನು ಕಾಪಾಡಲು ರಾಜನೀತಿಯನ್ನು ಪ್ರದರ್ಶಿಸಬೇಕೆಂದು ಸಲಹೆ ನೀಡಿದ್ದರು.
