Asianet Suvarna News Asianet Suvarna News

ಜಿಟಿ ದೇವೆಗೌಡ ಮೊಮ್ಮಗಳ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ!

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡರ ಮೂರು ವರ್ಷದ ಮೊಮ್ಮಗಳು ಗೌರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪುಣಾಣಿ ಕಳೆದ ಶನಿವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಳು.

Prime Minister Narendra Modi condoles the death of GT Deve Gowda granddaughter Gowri san
Author
Bengaluru, First Published May 27, 2022, 2:59 PM IST

ಬೆಂಗಳೂರು (ಮೇ. 27):  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ (Chamundeshwari MLA ) ಜಿಟಿ ದೇವೇಗೌಡರ (GT Devegowda ) ಮೂರು ವರ್ಷದ ಮೊಮ್ಮಗಳು ಗೌರಿ (Gowri Gowda) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂತಾಪ ಸೂಚಿಸಿ ಪತ್ರ ಬರೆದಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪುಣಾಣಿ ಕಳೆದ ಶನಿವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಳು.

ಪತ್ರ ಕಳುಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಮಾಡಿದ್ದಾರೆ. ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಇಷ್ಟು ಎಳೆ ವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ.  ತೀವ್ರ ದುಃಖದ ಈ ಸಮಯದಲ್ಲಿ ನನ್ನ ಸಂತಾಪಗಳು. ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ' ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ.

ನಿಮ್ಮ ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ನಿಲುಕದ್ದು.  ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪತ್ರದ ಮೂಲಕ ಪ್ರಧಾನಿ ಮೋದಿ ಸಾಂತ್ವನ ಹೇಳಿದ್ದಾರೆ.
 

ಬೆಂಗಳೂರಿನ ಆಸ್ಪತ್ರೆಯಲ್ಲಿ ಈ ತಿಂಗಳ ಆರಂಭದಿಂದ ಚಿಕಿತ್ಸೆ ಪಡೆಯುತ್ತಿದ್ದ ಗೌರಿಗೆ ಚಿಕಿತ್ಸೆ ಫಲಕಾರಿಯಾಗಿದೇ ಕಳೆದ ಶನಿವಾರ ಮೃತಪಟ್ಟದ್ದಳು. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗುಂಗ್ರಾಲ್ ಛತ್ರದಲ್ಲಿರುವ ಜಿಟಿ ದೇವೇಗೌಡ ಅವರ ಜಮೀನಿನಲ್ಲಿ ಅಂತ್ಯಸಂಸ್ಕಾರ ನೇರವೇರಸಲಾಗಿತ್ತು. ಅಂತ್ಯಸಂಸ್ಕಾರದಲ್ಲಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ಮುಖಂಡರು ಭಾಗವಹಿಸಿದ್ದರು.

3 ವರ್ಷದ ಗೌರಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹಾಗೂ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಉಪಾಧ್ಯಕ್ಷ ಜಿ.ಡಿ.ಹರೀಶ್‌ಗೌಡರ ಪುತ್ರಿ. ಅಸ್ಥಿಮಜ್ಜೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗೌರಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ ಮೈಸೂರು ತಾಲೂಕು ಇಲವಾಲ ಹೋಬಳಿ ಗುಂಗ್ರಾಲ್‌ ಛತ್ರ ಗ್ರಾಮಕ್ಕೆ ತಂದು, ಜಿ.ಟಿ. ದೇವೇಗೌಡರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಗೌರಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮೊಮ್ಮಗಳ ಸಾವಿನ ಶೋಕದಲ್ಲಿರುವ ಶಾಸಕ ಜಿ.ಟಿ.ದೇವೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಆಕೆ ಪುಣ್ಯವಂತೆ, ಮೊಮ್ಮಗಳ ಸಾವಿನ ಬಗ್ಗೆ ಮೊದಲ ಬಾರಿ ಮಾತನಾಡಿದ ಜಿ.ಟಿ. ದೇವೇಗೌಡ

ಗೌರಿಯ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೂರು ವರ್ಷದ ಮಗು ಗೌರಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ದೇವರು ಆ ಕುಟುಂಬಕ್ಕೆ ದುಃಖಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಿಟಿ ದೇವೇಗೌಡರ 3 ವರ್ಷದ ಮೊಮ್ಮಗಳು ವಿಧಿವಶ

ಕೆಲ ದಿನಗಳ ಹಿಂದೆ ಮೊದಲ ಬಾರಿಗೆ ಮೊಮ್ಮಗಳ ಸಾವಿನ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದ ಜಿ.ಟಿ. ದೇವೇಗೌಡ, ನನ್ನ ಮೊಮ್ಮಗಳು ಬಹಳ ಚೂಟಿಯಾಗಿದ್ದಳು. ಅವಳಿಗೆ ಕ್ಯಾನ್ಸರ್ ಬಂದಿತ್ತು. ಆದರೆ, ಏಳು ತಿಂಗಳಲ್ಲಿ ಅವಳು ಕ್ಯಾನ್ಸರ್ ಗೆದಿದ್ದಳು. ವೈದ್ಯರು ಕೂಡ ಕ್ಯಾನ್ಸರ್ ಮುಕ್ತ ಎಂದು ಹೇಳಿ ಸಂತೋಷ ಪಟಿದ್ದರು. ಆದರೆ, ಅವಳಿಗೆ ದಿಢೀರನೇ ಆ ಲಕ್ಷಣಗಳು ಕಾಣಿಸಿಕೊಂಡು ಸಾವು ಬಂತು ಎಂದು ಬೇಸರ ವ್ಯಕ್ತಪಡಿಸಿದರು. ಗೌರಿ ಸಾವಿನ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಮುಖಂಡರು ಸಾಂತ್ವನ ಹೇಳಿದ್ದಾರೆ. ಯಾವ ಪಕ್ಷದವರ ಜೊತೆಗೂ ರಾಜಕಾರಣ ಮಾತನಾಡಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ‌ ಅವರ ಜೊತೆ ಮಾತು ಬಿಟ್ಟು ಎರಡೂವರೆ ವರ್ಷವಾಗಿತ್ತು. ಅವರು ಕೂಡ ಬಂದು ಸಾಂತ್ವಾನ ಹೇಳಿದ್ದಾರೆ ಎಂದರು.

 

Follow Us:
Download App:
  • android
  • ios