IAS vs IPS Fight: ಖಾಸಗಿ ಫೋಟೋ ಹಂಚಿಕೆ ಬಗ್ಗೆ ಪ್ರತಿಕ್ರಿಯೆ: ರೂಪಾಗೆ ಮಾನಸಿಕ ಸ್ಥಿಮಿತವಿಲ್ಲ ಎಂದ ರೋಹಿಣಿ ಸಿಂಧೂರಿ

ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಆರೋಪದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ರೋಹಿಣಿ ಸಿಂಧೂರಿ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Private photo viral Rohini Sindhuri was the first to react for D Roopa Sat

ಬೆಂಗಳೂರು (ಫೆ.19): ಐಪಿಎಸ್‌ ಅಧಿಕಾರಿ (ಐಜಿಪಿ) ಡಿ. ರೂಪಾ ಮೌದ್ಗಿಲ್‌ ಅವರು ಬೆಳಗ್ಗೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಹಂಚಿಕೊಂಡು ವೈರಲ್‌ ಮಾಡುತ್ತಿದ್ದು, ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ರೋಹಿಣಿ ಸಿಂಧೂರಿ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರೆ.

ಫೋಟೋ ಹಂಚಿಕೆ ಮಾಡಿರುವುದು ಆಧಾರಹರಿತ ಆರೋಪವಾಗಿದೆ. ನನ್ನ ತೇಜೋವಧೆ ಮಾಡುತ್ತಿದ್ದಾರೆ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ನನ್ನ ವಿರುದ್ಧ ಸುಳ್ಳು, ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ. ಯಾವಾಗಲೂ ಸುದ್ದಿಯಲ್ಲಿರಬೇಕೆಂದು ಅವರು ಬಯಸುತ್ತಾರೆ. ಹೀಗಾಗಿ, ಈ ರೀತಿ ಮಾಡುತ್ತಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಮಡಿದ್ದು, ಮಾನಸಿಕ ರೋಗಕ್ಕೆ ಚಿಕತ್ಸೆ ಪಡೆದುಕೊಳ್ಳಬೇಕು. ಈಗ ತೇಜೋಧೆ ಮಾಡಲು ಮುಂದಾಗಿರುವ ರೂಪಾ ಅವರ ವಿರುದ್ಧ ನಾನು ಕಾನೂನಾತ್ಮಕ ಹೋರಾಟ ಮಾಡುತ್ತೇನೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 

IAS vs IPS Fight: ಈ ಪಿಕ್ಸ್ ಕೇವಲ ಸ್ಯಾಂಪಲ್ ಅಷ್ಟೆ: ಆಕೆ ಬಿಹೇವಿಯರ್‌ ಸರಿಯಿಲ್ಲ..! ಎಂದ ಡಿ ರೂಪಾ

ನನ್ನ ಫೋಟೋಗಳನ್ನು ಕಳುಹಿಸಿ ಅಪಪ್ರಚಾರ:  ನನ್ನ ಫೋಟೋಗಳನ್ನು ಸಾಮಾಜಿ ಮಾಧ್ಯಮಗಳಲ್ಲಿ ಹಂಚಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾರಿಗೆ ಫೋಟೋಗಳನ್ನು ಕಳುಹಿಸಿದ್ದೇನೆ ಎಂಬುದನ್ನು ಬಹಿರಂಗಪಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೇಕಾಬಿಟ್ಟಿಯಾಗಿ ಪೋಸ್ಟ್‌ ಮಾಡುತ್ತಿದ್ದಾರೆ. ಅವರು ಮಾಧ್ಯಮಗಳು ಹಾಗೂ ರಾಜ್ಯದ ಜನರ ಗಮನ ಸೆಳೆಯಲು ಈ ರೀತಿ ಫೋಟೋಗಳನ್ನು ಹಂಚಿಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ. ರೂಪಾ ಅವರಿಗೆ ಇದೊಂದು ಅಭ್ಯಾಸವಾಗಿ ಬಿಟ್ಟಿದೆ. ಅವರು ದ್ವೇಷ ಸಾಧಿಸಲು ಹೊರಟಿರುವುದು ಸಮಾಜಕ್ಕೆ ದೊಡ್ಡ ಅಪಾಯಕಾರಿ ಆಗಿದೆ ಎಂದು ಹೇಳಿದರು.

ಒಳ್ಳೆ ಕೆಲಸಗಳ ಕಡೆ ಗಮನ ಕೊಟ್ಟರೆ ಒಳ್ಳೆಯದು: 
ರೂಪಾ ಅವರು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಹುದ್ದೆಗಳಿಗೆ ಇದೇ ರೀತಿ ಆರೋಪ ಮಾಡ್ತಿದ್ದಾರೆ. ಒಳ್ಳೆ ಕೆಲಸಗಳ ಕಡೆ ಗಮನ ಕೊಟ್ಟರೆ ಒಳ್ಳೆಯದು. ಇನ್ನೊಬ್ಬರನ್ನ ಗುರಿಯಾಗಿಸಿಕೊಂಡು ತೇಜೋವಧೆ ಮಾಡುವುದು ನಿಲ್ಲಿಸಬೇಕು. ನನ್ನ ವಿರುದ್ದ ಯಾವುದೋ ವೈಯಕ್ತಿಕ ಹಗೆ ಇಟ್ಟುಕೊಂಡು ಸುಳ್ಳು ಅಭಿಯಾನ‌ ನಡೆಸ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನನ್ನ ಫೋಟೋಗಳ ಸ್ಕ್ರೀನ್ ಶಾಟ್ ಹಾಕಿದ್ದಾರೆ. ಅದನ್ನ ಯಾವ ಅಧಿಕಾರಿಗೆ ಕಳಿಸಿದ್ದೀನಿ ಅಂತಾ ಬಹಿರಂಗ ಮಾಡಬೇಕು. ಇದರ ಬಗ್ಗೆ ತನಿಖೆ ಆಗ್ಬೇಕು ಅಂತಾ ನಾನೂ ಆಗ್ರಹ ಮಾಡ್ತೇನೆ. ರೂಪಾ ವಿರುದ್ಧ ಕಾನೂನು ಕ್ರಮ ಕೈಗೊಳ್ತೀನಿ ಎಂದು ಹೇಳಿದ್ದಾರೆ.

IAS vs IPS Fight:ರೋಹಿಣಿ ಸಿಂಧೂರಿ ಖಾಸಗಿ ಚಿತ್ರ ಫೋಸ್ಟ್ ಮಾಡಿದ ಡಿ. ರೂಪ

ತನಿಖೆ ಆಗಬೇಕು ಎಂದು ಆಗ್ರಹಿಸಿದ್ದ ರೂಪಾ ಮೌದ್ಗಿಲ್: ರೋಹಿಣಿ ಸಿಂಧೂರಿ ವಿರುದ್ಧ ಬೆಳಗ್ಗೆ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡಿದ್ದ ರೂಪ ಅವರು ಈಗ ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಹಂಚಿಕೊಂಡು ಇದರ ಅರ್ಥ ಏನಿರಬಹುದು ಎಂದು ಪ್ರಶ್ನೆ ಕೇಳಿದ್ದಾರೆ. ಐಪಿಎಸ್‌ ಅಧಿಕಾರಿ ಡಿ. ರೂಪ ಅವರು, ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡುವ ಮೂಲಕ ಕಿಚ್ಚು ಹಚ್ಚಿದ್ದರು. ಈಗ ರೂಪ ಅವರು ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಹರಿಬಿಟ್ಟಿದ್ದಾರೆ. ಇಂತಹ ಫೋಟೋಗಳನ್ನು ಕೆಲವು ಐಎಎಸ್‌ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಅವರ ವಿರುದ್ಧ ತನಿಖೆಯಾಗಬೇಕು ಎಂದು ರೂಪಾ ಮೌದ್ಗಿಲ್‌ ತಿಳಿಸಿದ್ದರು. 

Latest Videos
Follow Us:
Download App:
  • android
  • ios