ನಾಳೆ ಖಾಸಗಿ ಸಾರಿಗೆ ಮುಷ್ಕರ; ಬೆಂಗಳೂರಿನ ಈ ಪ್ರದೇಶದ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡುವುದು ಸೇರಿ 30 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಭಾನುವಾರ ಬೆಂಗಳೂರು ಬಂದ್ ಗೆ ಕರೆ ನೀಡಿರುವುದರಿಂದ ಕೆಲವು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿವೆ.
ಬೆಂಗಳೂರು (ಸೆ.10) ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡುವುದು ಸೇರಿ 30 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಭಾನುವಾರ ಬೆಂಗಳೂರು ಬಂದ್ ಗೆ ಕರೆ ನೀಡಿರುವುದರಿಂದ ಕೆಲವು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿವೆ.
ಕಾರ್ಯನಿರ್ವಹಣೆಗೆ ಖಾಸಗಿ ಸಾರಿಗೆಯನ್ನೇ ಅವಲಂಬಿಸಿರುವ ಕೆಲವು ಶಾಲೆಗಳಿಗೆ ಮುಷ್ಕರದಿಂದ ಮಕ್ಕಳನ್ನು ಕರೆತರಲು ತೊಂದರೆ ಆಗುವ ಹಿನ್ನೆಲೆ ರಜೆ ಘೋಷಿಸಿವೆ. ಅದ್ಯಾಗೂ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಸಹ ಬಂದ್’ಗೆ ಬೆಂಬಲವನ್ನು ನೀಡಿದ್ದರೂ ಕೂಡ ಅದರ ಎಲ್ಲಾ ಸದಸ್ಯ ಶಾಲೆಗಳಿಗೆ ರಜೆ ಘೋಷಿಸಿಲ್ಲ.
ಇಂದು ರಾತ್ರಿಯಿಂದ ಬೆಂಗ್ಳೂರಲ್ಲಿ ಖಾಸಗಿ ಸಾರಿಗೆ ಸೇವೆ ಬಂದ್!
'ನಾಳೆ ಸೆಪ್ಟೆಂಬರ್ 11 ರಂದು ಖಾಸಗಿ ಸಾರಿಗೆ ಮುಷ್ಕರವು ಇರಲಿದೆ ಈ ವೇಳೆ ಯಾವುದೇ ಖಾಸಗಿ ಸಾರಿಗೆ ವಾಹನಗಳು ಕಾರ್ಯಚರಿಸುವುದಿಲ್ಲ. ಹೀಗಾಗಿ ನಿಮ್ಮ ಪ್ರಯಾಣದ ಮೇಲೆ ಪರಿಣಾಮ ಬೀರಬಹುದು' ಎಂದು ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೆಲವು ಶಾಲೆಗಳು ರಜೆ ಘೋಷಿಸಿರುವುದರಿಂದ, ಪೋಷಕರಲ್ಲಿ ಗೊಂದಲವನ್ನು ಸೃಷ್ಟಿಸಿದೆ. ಆದರೆ ಕೇವಲ ಖಾಸಗಿ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಿರುವ ಶಾಲೆಗಳು ರಜೆ ಘೋಷಿಸಿವೆ. ಎಲ್ಲಾ ಶಾಲೆಗಳಿಗೆ ಸಾರ್ವತ್ರಿಕ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ನಿರ್ದಿಷ್ಟ ದಿನದಂದು ಮಕ್ಕಳನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡಲು ವ್ಯವಸ್ಥೆ ಮಾಡುವಂತೆ ಪಾಲಕರಿಗೆ ಕುಮಾರ್ ವಿನಂತಿಸಿದ್ದಾರೆ.