ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!
ಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ವಿಚಾರ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬೆಂಗಳೂರು (ಮಾ.22): ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ವಿಚಾರ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಲಂಚ ಪಡೆದ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ರನ್ನ ಬಂಧನ ಮಾಡಿರುವ ವಿಚಾರಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾರನ್ನು ಉದ್ದೇಶಿಸಿ ಚೋರ್ ಗುರು ಚಾಂಡಲ್ ಶಿಷ್ಯ ಎಂದು ಬರೆದುಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ. ರಾಜ್ಯ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೇ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾಗೆ ದೂರು ನೀಡಲಾಗಿದೆ.
ಸಿಎಂ ಸಿದ್ಧರಾಮಯ್ಯ ಅವರೇ ಚೋರ್ ಗುರು, ಪ್ರಿಯಾಂಕಾ ಖರ್ಗೆ ಚಂಡಾಲ ಶಿಷ್ಯ: ಛಲವಾದಿ ನಾರಾಯಣಸ್ವಾಮಿ
ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಪ್ರಧಾನಿ ಹಾಗೂ ಗೃಹ ಸಚಿವರ ವಿರುದ್ಧ ಸಂವಿಧಾನ ವಿರೋಧ ಪದ ಬಳಕೆ ಮಾಡಿರುವ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆಯನ್ನ ತಕ್ಷಣ ಬಂಧಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ಕಾನೂನಿನ ವಿರುದ್ಧವಾಗಿ, ಸಂವಿಧಾನದ ವಿರುದ್ಧವಾಗಿ 'ಚಾಂಡಾಳ' ಎಂಬ ಪದ ಬಳಸಿದ್ದಾರೆ. ಹೀಗಾಗಿ ಶೀಘ್ರ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅನಂತಕುಮಾರ್ ಹೆಗಡೆ ಬದಲು ಕಾರ್ಯಕರ್ತರಿಗೆ ಟಿಕೆಟ್ ಕೊಡಿ: ಛಲವಾದಿ ನಾರಾಯಣಸ್ವಾಮಿ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 100 ಕೋಟಿ ಲಂಚ ಪಡೆದಿರುವ ಪ್ರಕರಣ ಸಂಬಂಧ ಉತ್ತರಿಸುವಂತೆ ಇ.ಡಿ 9 ಬಾರಿ ಸಮನ್ಸ್ ನೀಡಿದ್ರೂ ಇದುವರೆಗೆ ವಿಚಾರಣೆಗೆ ಹಾಜರಾಗಿರಲಿಲ್ಲ. ಯಾವುದೇ ರೀತಿ ಪ್ರತಿಕ್ರಿಯಿಸಿಲ್ಲ. ಈ ಹಿನ್ನೆಲೆ ದೆಹಲಿ ಸಿಎಂರನ್ನ ಅರೆಸ್ಟ್ ಮಾಡಲಾಗಿದೆ. ಲಂಚ ಪಡೆದಿಲ್ಲ ಎಂದಾದರೆ ಇ ಡಿ ಯವರು 9 ನೇ ಬಾರಿ ಕೇಜ್ರಿವಾಲ್ ಗೆ ಸಮಸ್ಸ್ ನೀಡಿದ್ರೂ ಪ್ರತಿಕ್ರಿಯಿಸಿಲ್ಲ, ವಿಚಾರಣೆಗೆ ಹಾಜರಾಗಿಲ್ಲ ಯಾಕೆ? ಇಡಿಯವರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ. ಕೇಜ್ರಿವಾಲ್ ರಾಜಕೀಯ ಕ್ಕೆ ಬಂದ ನಂತರ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೆನೆ ಎಂದಿದ್ರು ಆದರೆ ಇದೀಗ ಅವರೇ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದ್ದಾರೆ. ಹೀಗಾಗಿ ಅವರ ವಿರುದ್ಧ ಸಾಲು ಸಾಲು ಆಪಾದನೆಗಳು ಬಂದಿವೆ. ಅನೇಕ ಮಂತ್ರಿಗಳು ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ.