ಯಾದಗಿರಿ: ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದ್ದು, ‘ಬಲೀ ಕಾ ಬಕ್ರಾ’ (ಹರಕೆಯ ಕುರಿ) ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಜಿಲ್ಲೆಯ ಸೈದಾಪೂರ ಸಮೀಪದ ಬಳಿಚಕ್ರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಉಮೇಶ್ ಜಾಧವ್
ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಚಿಂಚೋಳಿ ಶಾಸಕ ಡಾ. ಉಮೇಶ ಜಾಧವ್ ಅವರು ಖರ್ಗೆ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. 

ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಪಕ್ಷ ಬಿಡಲು ಕೆಲವರಿಗೆ ಒಂದಿಲ್ಲವೊಂದು ಕಾರಣಬೇಕು, ಹೀಗಾಗಿ ಈಗ ನನ್ನ ಹೆಸರನ್ನು ವಿನಾಕಾರಣ ಬಳಸಿಕೊಳ್ಳಲಾಗುತ್ತಿದೆ. ನನ್ನನ್ನು ಬಲೀ ಕಾ ಬಕ್ರಾ ಮಾಡಲಾಗುತ್ತಿದೆ ಎಂದರು. ಶಾಸಕ ಡಾ.ಉಮೇಶ ಜಾಧವ್ ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದಾರೆ. ಅವರಿಗೆ ಕರೆ ಮಾಡಿದರೂ ಸಂಪರ್ಕಕ್ಕೆ ಸಾಧ್ಯವಾಗಿಲ್ಲ, ಜ. 25 ರಂದು ಸಹ ಕರೆ ಮಾಡಿದ್ದೆ ಎಂದ ಖರ್ಗೆ ಮುಂದೆ ಅವರನ್ನು ಭೇಟಿ ಮಾಡುವೆ ಎಂದಿದ್ದಾರೆ.