ಸಮಾಜ ವಿರೋಧಿ, ದೇಶ ವಿರೋಧಿ ಚಟುವಟಿಕೆಗಳಲ್ಲಿ ನಿರತವಾಗಿರುವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಚಿಕ್ಕಮಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಮಂಡ್ಯ/ ಚಿಕ್ಕಮಗಳೂರು (ಆ.02): ಸಮಾಜ ವಿರೋಧಿ, ದೇಶ ವಿರೋಧಿ ಚಟುವಟಿಕೆಗಳಲ್ಲಿ ನಿರತವಾಗಿರುವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಚಿಕ್ಕಮಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲಕಾಲ ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಸಮಾಜದ್ರೋಹಿ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜನಾಂಗೀಯ ದ್ವೇಷ ಹರಡುತ್ತಿರುವ ಸಂಘಟನೆಗಳಿಂದ ದೇಶದ ಏಕತೆ ಮತ್ತು ಅಖಂಡತೆಗೆ ಧಕ್ಕೆ ಉಂಟಾಗುತ್ತಿದೆ. ಅಕ್ರಮ ಗೋ ಸಾಗಾಣಿಕೆಗೆ ಕುಮ್ಮಕ್ಕು, ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಟೀಕಿಸುವುದು ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಈ ಸಂಘಟನೆಗಳು ಸಕ್ರಿಯವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಚಿಕ್ಕಮಗಳೂರಿನ ಆಜಾದ್ ಪಾರ್ಕ್ನಲ್ಲಿ ಸಮಾವೇಶಗೊಂಡ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Uttara Kannada: ಮಳೆಗಾಗಿ ಹೆಣ್ಣು - ಹೆಣ್ಣಿನ ನಡುವೆ ದಾದುಮ್ಮನ ಮದುವೆ
ಕರಾವಳಿಯಲ್ಲಿ ಪ್ರವೀಣ್ ನೆಟ್ಯಾರು ಹತ್ಯೆ ನಡೆದಿದ್ದು, ರಾಜ್ಯದ ಜನತೆ ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಸ್ಪಷ್ಟನಿದರ್ಶನವಾಗಿದೆ. ರಾಜ್ಯದಲ್ಲಿ ಹಿಂದೂ ಸಂಘಟನೆ ಮತ್ತು ಸಿದ್ಧಾಂತದ ಪರವಾಗಿ ಹೋರಾಟ ಮಾಡುವವರನ್ನು ಗುರಿಯಾಗಿಸಿಕೊಂಡು ಕೊಲೆ ನಡೆಸುತ್ತಿರುವುದು ಖಂಡನೀಯ. ಹತ್ಯೆ ಹಿಂದೆ ಪಿಎಫ್‌ಐ, ಸಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ಹೆಸರು ತಳಕು ಹಾಕಿಕೊಳ್ಳುತ್ತಿದೆ. ಸರ್ಕಾರ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು.
ಎಬಿವಿಪಿ ಪ್ರತಿಭಟನೆ: ರಾಜ್ಯದಲ್ಲಿ ಕೊಲೆ, ಕೋಮು ಸಂಘರ್ಷಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರ ಹಿಂದಿರುವ ಪಿಎಫ್‌ಐ, ಸಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಆಜಾದ್ ಪಾರ್ಕ್ನಲ್ಲಿ ಸಮಾವೇಶಗೊಂಡ ಎಬಿವಿಪಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕರಾವಳಿಯಲ್ಲಿ ಪ್ರವೀಣ್ ನೆಟ್ಯಾರು ಹತ್ಯೆ ನಡೆದಿದ್ದು, ರಾಜ್ಯದ ಜನತೆಗೆ ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ.
ರಾಜ್ಯದಲ್ಲಿ ಹಿಂದೂ ಸಂಘಟನೆ ಮತ್ತು ಸಿದ್ಧಾಂತದ ಪರವಾಗಿ ಹೋರಾಟ ಮಾಡುವವರನ್ನು ಗುರಿಯಾಗಿಸಿಕೊಂಡು ಕೊಲೆ ನಡೆಸುತ್ತಿರುವುದು ಖಂಡನೀಯ ಎಂದರು. ರಾಜ್ಯದಲ್ಲಿ ಪದೇಪದೇ ಕೊಲೆಗಳು ನಡೆಯುತ್ತಿವೆ. ಇದನ್ನು ಗಮನಿಸಿದರೆ, ಗೃಹ ಇಲಾಖೆ ವೈಫಲ್ಯತೆ ಎದ್ದುಕಾಣುತ್ತಿದೆ. ಹತ್ಯೆ ಕೃತ್ಯದಲ್ಲಿ ಭಾಗಿ ಆಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.
ಗದ್ದೆಗಿಳಿದು ನಾಟಿ ಮಾಡಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್
ರಾಜ್ಯದಲ್ಲಿ ಒಂದು ಸಿದ್ಧಾಂತ ಮತ್ತು ರಾಷ್ಟ್ರೀಯತೆ ವಿಚಾರಧಾರೆಗಳ ಪರವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಹತ್ಯೆ ಹಿಂದಿರುವ ಪಿಎಫ್‌ಐ, ಸಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ಹೆಸರು ತಳಕು ಹಾಕಿಕೊಳ್ಳುತ್ತಿದೆ. ಸರ್ಕಾರ ಕೂಡಲೇ ಈ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
