Asianet Suvarna News Asianet Suvarna News

ಕುಡಿದ ಮತ್ತಿನಲ್ಲಿ ಪಾಕಿಸ್ತಾನ ಪರ ಘೋಷಣೆ;ಇಬ್ಬರ ಬಂಧನ

ಕಂಠಪೂರ್ತಿ ಕುಡಿದು ಮದ್ಯದ ನಶೆಯಲ್ಲಿ  ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಘಟನೆ ತಡರಾತ್ರಿ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂಬ ಇಬ್ಬರ ಆರೋಪಿಗಳನ್ನು ಬಂಧಿಸಿದ ಜೆಪಿ ನಗರ ಠಾಣೆಯ ಪೊಲೀಸರು.

Pro Pakistan Slogan while drunk two arrested in JP Nagar at bengaluru rav
Author
First Published Dec 3, 2023, 11:08 AM IST

ಬೆಂಗಳೂರು (ಡಿ.3): ಕಂಠಪೂರ್ತಿ ಕುಡಿದು ಮದ್ಯದ ನಶೆಯಲ್ಲಿ  ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಘಟನೆ ತಡರಾತ್ರಿ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂಬ ಇಬ್ಬರ ಆರೋಪಿಗಳನ್ನು ಬಂಧಿಸಿದ ಜೆಪಿ ನಗರ ಠಾಣೆಯ ಪೊಲೀಸರು.

ನಿನ್ನೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ20 ಪಂದ್ಯವಿತ್ತು. ಜೆಪಿನಗರದ ಮೊದಲನೇ  ಹಂತದಲ್ಲಿರುವ ಪಬ್ ನಲ್ಲಿ ಮದ್ಯ ಸೇವಿಸುತ್ತಾ ಪಂದ್ಯ ವೀಕ್ಷಣೆ ಮಾಡುತ್ತಿದ್ದ ಕಿಡಿಗೇಡಿಗಳು. ಈ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗ್ತಿದ್ದಂತೆ ಅಲ್ಲಿದ್ದ ಇತರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಂತರ ಪಬ್ ನಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಪಾಕ್‌ ಪರ ಘೋಷಣೆ: ಐದಕ್ಕೂ ಹೆಚ್ಚು ಜನರ ವಿರುದ್ಧ ಕೇಸು

ಘಟನೆ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಜೆಪಿ ನಗರ ಪೊಲೀಸರು ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು. ಮದ್ಯದ ನಶೆಯಲ್ಲಿ ಕೂಗಿದ್ದಾಗಿ ಪೊಲೀಸರ ಮುಂದೆ ಹೇಳಿರುವ ಆರೋಪಿಗಳು. ಸದ್ಯ ಈ ಪ್ರಕರಣ ಸಂಬಂಧ ಜೆಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಕಿಸ್ತಾನ ಪರ ಬೇಹುಗಾರಿಕೆ : ಓರ್ವ ಸೆರೆ!

Follow Us:
Download App:
  • android
  • ios