ಮಾಜಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಇದೀಗ ತಮ್ಮ ಹಳೆಯ ವೈಷಮ್ಯವನ್ನು ಮರೆತು ಒಂದಾಗಿದ್ದಾರೆ. ಇದರಿಂದ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತದ ಚುಕ್ಕಾಣಿ ಕಾಂಗ್ರೆಸ್ ಪಾಲಾಗಿದೆ. 

ಬೆಳಗಾವಿ: ಮಾಜಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ತಮ್ಮ ವೈಯಕ್ತಿಕ ಪ್ರತಿಷ್ಠೆಯನ್ನು ಒದಿಗಿಟ್ಟು ಒಂದಾದ ಪರಿಣಾಮ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತದ ಚುಕ್ಕಾಣಿ ಕಾಂಗ್ರೆಸ್ ಪಾಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇವೇಳೆ ಕಳೆದ ಸಾಲಿನಲ್ಲಿ ಇವರಿಬ್ಬರ ಜಟಾಪಟಿಯ ಲಾಭ ಪಡೆದಿದ್ದ ಎಂಇಎಸ್ ಮತ್ತು ಬಿಜೆಪಿಗೆ ಈ ಬಾರಿ ಮುಖಭಂಗವಾಗಿದೆ.

ಸತೀಶ ಜಾರಕಿಹೊಳಿ ಅವರ ಬೆಂಬಲಿಗ ಕಾಕತಿಯ ಆನಂದ ಪಾಟೀಲ್ ಅಧ್ಯಕ್ಷರಾಗಿ ಮತ್ತು ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಂಬಲಿಗ ಬಸವನ ಕುಡಚಿಯ ಸುಧೀರ ಗಡ್ಡೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.