ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನ| ಶಬ್ದಬ್ರಹ್ಮ, ಶತಾಯುಷಿ, ಪ್ರೊ.‌ ಜಿ ವೆಂಕಟಸುಬ್ಬಯ್ಯ ನಿಧನಕ್ಕೆ ಗಣ್ಯರ ಸಂತಾಪ| ಕನ್ನಡ ಸಾಹಿತ್ಯ ಲೋಕಕ್ಕೆ ಜಿ.ವಿ. ಅವರ ಕೊಡುಗೆ ಅಪಾರವಾದದ್ದು. ನಮ್ಮ ನಾಡಿಗೆ ಇದು ತುಂಬಲಾರದ ನಷ್ಟ.

ಬೆಂಗಳೂರು(ಏ.19): ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಸಿಎಂ ಬಿಎಸ್‌ವೈ, ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಸಂಸದ ಪ್ರಹ್ಲಾದ್ ಜೋಶಿ ಸೇರಿ ರಾಜಕೀಯ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Scroll to load tweet…

ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ 'ಹಿರಿಯ ವಿದ್ವಾಂಸರು, ನಿಘಂಟು ತಜ್ಞ, ಶತಾಯುಷಿ, ನಾಡೋಜ, ಪದ್ಮಶ್ರೀ ಪ್ರೊ ಜಿ.ವೆಂಕಟಸುಬ್ಬಯ್ಯರವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಭಾಷಾ ತಜ್ಞರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಶಿಕ್ಷಕರಾಗಿ ಕನ್ನಡಕ್ಕೆ ಅಪಾರ ಸೇವೆ ಸಲ್ಲಿಸಿರುವ ಆ ಅಕ್ಷರ ತಪಸ್ವಿಗಳ ನಿಧನದಿಂದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಅವರ ಅಪೂರ್ವ ಸಾಧನೆಗಳು ಕನ್ನಡಿಗರ ಪಾಲಿಗೆ ಚಿರಸ್ಥಾಯಿಯಾಗಿದೆ. ಪ್ರೊ ವೆಂಕಟಸುಬ್ಬಯ್ಯನವರ ಪಾದಗಳಿಗೆ ಅಂತಿಮ ನಮನಗಳನ್ನು ಸಲ್ಲಿಸುತ್ತಾ, ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ' ಎಂದಿದ್ದಾರೆ.

Scroll to load tweet…

ಇನ್ನು ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಕೂಡಾ ಟ್ವಿಟ್ ಮಾಡಿದ್ದು, 'ಶಬ್ದಬ್ರಹ್ಮ'ನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನ ಕನ್ನಡ ಸಾರಸ್ವರ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ‌ಕೋರುವೆ. .ಜಿ.ವೆಂಕಟುಸುಬ್ಬಯ್ಯ ಅವರ ಕುಟುಂಬ ಮತ್ತು‌‌ ಸಮಸ್ತ‌ ಕನ್ನಡಿಗರ ಶೋಕದಲ್ಲಿ‌ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.

Scroll to load tweet…

ಮಾಜಿ ಸಿಎಂ ಹಾಗು ಜೆಡಿಇಎಸ್‌ ನಾಯಕ ಎಚ್‌. ಡಿ. ಕುಮಾರಸ್ವಾಂಇ ಕೂಡಾ ಟ್ವೀಟ್ ಮಾಡಿದ್ದು, ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು. ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Scroll to load tweet…

ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣರವರೂ ಸಂತಾಪ ವ್ಯಕ್ತಪಡಿಸಿದ್ದು, ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. 108 ವರ್ಷಗಳ ಶತಾಯುಷಿ, ನಮ್ಮ ನಾಡಿನ ಹಿರಿಯ ʼಜೀವಿʼಯಾಗಿದ್ದ ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕದ ಮಹೋನ್ನತ ಕೊಂಡಿಯೊಂದು ಕಳಚಿಬಿದ್ದಂತೆ ಆಗಿದೆ. ನಡೆದಾಡುವ ನಿಘಂಟು, ಶಬ್ದಬ್ರಹ್ಮ ಎಂದೇ ನಾಡಿನಲ್ಲಿ ಹೆಸರಾಗಿದ್ದ ಅವರು, ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಿಸಿದ್ದಾರೆ. ʼಇಗೋ ಕನ್ನಡʼ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದರು ಎಂದು ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 

Scroll to load tweet…
Scroll to load tweet…

ಇನ್ನು ಮಾಜಿ ಪ್ರಧಾನಿ, ಜೆಡಿಎಸ್‌ ನಾಯಕ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಕೂಡಾ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.