ಬೆಂಗಳೂರು (ಆ.24): ಕನ್ನಡದ ವಿದ್ವಾಂಸ, ನಿಘಂಟು ತಜ್ಞ ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು 106 ವಸಂತಗಳನ್ನು ಪೂರೈಸಿ, ಆಗಸ್ಟ್ 23 ರಂದು 107ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ನಾಡಿನ ಅನೇಕರು ತಮ್ಮ ಸಂತಸವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡದ ಏಳಿಗೆಗಾಗಿ ದುಡಿದವರು, ದುಡಿಯುತ್ತಿರುವವರು ಪ್ರೊ.ಜಿ. ವೆಂಕಟಸುಬ್ಬಯ್ಯ. ಕನ್ನಡದ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. 

ಬಾದಾಮಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಫೋಟೋಸ್

ಇವರ ಭಾಷಾ ಸಾಹಿತ್ಯ ಸಾಧನೆಗೆ ಹಂಪಿ ವಿಶ್ವವಿದ್ಯಾಲಯ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನಿತ್ತು ಗೌರವಿಸಿದೆ. ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಭಾಷಾ ಸಮ್ಮಾನ್‌, ಗೋಕಾಕ್‌ ಪ್ರಶಸ್ತಿ, ಅನಕೃ ನಿರ್ಮಾಣ್‌ ಸ್ವರ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಪ್ರೊ. ವೆಂಕಟಸುಬ್ಬಯ್ಯ ಅವರ ಮುಡಿಗೇರಿವೆ. ಬೆಂಗಳೂರಿನಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.