Asianet Suvarna News Asianet Suvarna News

ಕೆಎಸ್‌ಆರ್‌ಟಿಸಿಗೆ ಮತ್ತೆ ಪ್ರತಿಭಟನೆ ಬಿಸಿ: ನೌಕರರಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭ

ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾವಿರಾರು ಕೆಎಸ್‌ಆರ್‌ಟಿಸಿ ನೌಕರರು ಅನಿರ್ಧಿಷ್ಟಾವಧಿ ಪ್ರತಿಭಟನಾ ಧರಣಿಯನ್ನು ಆರಂಭಿಸಿದ್ದಾರೆ. 

Protest against KSRTC again employees start indefinite sit in freedom Park sat
Author
First Published Feb 6, 2023, 2:31 PM IST

ಬೆಂಗಳೂರು (ಫೆ.06): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದಿಂದ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾವಿರಾರು ಕೆಎಸ್‌ಆರ್‌ಟಿಸಿ ನೌಕರರು ಅನಿರ್ಧಿಷ್ಟಾವಧಿ ಪ್ರತಿಭಟನಾ ಧರಣಿಯನ್ನು ಆರಂಭಿಸಿದ್ದಾರೆ. 

ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಎಲ್ಲ ನೌಕರರ ನೇತೃತ್ವದಲ್ಲಿ ಹೋರಾಟ ಆರಂಭಿಸಲಾಗಿದೆ. ಸಾರಿಗೆ ನೌಕರರ ಪ್ರತಿಭಟನೆಗೆ ಕೂಡಲಸಂಗಮ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಚಾಲನೆ ನೀಡಿದರು. ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ನಟ ಅಹಿಂಸಾ ಚೇತನ್, ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಜಗದೀಶ್ ಹೆಚ್. ಆರ್., ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ರಾಮು ಭಾಗಿಯಾಗಿದ್ದರು.

ಬೇಡಿಕೆ ಈಡೇರಿಸದ ಹಿನ್ನೆಲೆ: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸಾರಿಗೆ ನೌಕರರು!

ಸಾರಿಗೆ ನೌಕರರ ಬೇಡಿಕೆಗಳು
1. ದಿನಾಂಕ 1-1-2020 ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಿ ಬಾಕಿ ಇದ್ದು, ಕೂಡಲೇ ವೇತನ ಹೆಚ್ಚಳ ಮಾಡುವುದು.
2. ಮುಷ್ಕರ ಸಮಯದಲ್ಲಿ ವಜಾಗೊಂಡ ನಾಲ್ಕು ನಿಗಮ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು (ದಿನಾಂಕ 6-4-2021) ರ ಯಥಾಸ್ಥಿತಿ ಕಾಪಾಡುವುದು.
3. ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾ ಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.
4. ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು ಮತ್ತು ಅವರಿಗೆ ಸರಿಯಾದ ರೀತಿ ಪಿಂಚಣಿ ಸೌಲಭ್ಯವನ್ನು ಒದಗಿಸುವುದು.
5. ಸಾರಿಗೆ ಸಂಸ್ಥೆಯ ನೌಕರರಿಗೆ ನಗದು ರಹಿತ ಉತ್ತಮವಾದ ಅರೋಗ್ಯ ಯೋಜನೆಗಳನ್ನು ಒದಗಿಸುವುದು.

ಪರಿಷ್ಕೃತ ವೇತನ ಹೆಚ್ಚಳಕ್ಕೆ ಆಗ್ರಹ: 
ದಾವಣಗೆರೆ (ಜ.24): ಮೂಲ ವೇತನಕ್ಕೆ ಬಿಡಿಎ ಸಮ್ಮಿಳಿತಗೊಳಿಸಿ ಪರಿಷ್ಕೃತ ವೇತನ ಹೆಚ್ಚಳ ಮಾಡಿ ವೇತನ ಶ್ರೇಣಿ ಸಿದ್ದಪಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಡಿಯಲ್ಲಿ ಕೆಎಸ್ ಆರ್ ಟಿಸಿ ನೌಕರರು ತಾಲ್ಲೂಕು ಕಚೇರಿ ಎದುರಿನ ಕೆಎಸ್ಆರ್ಟಿಸಿ ನೂತನ ಕಟ್ಟಡದ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದ್ದರು. ಮೂಲ ವೇತನಕ್ಕೆ ಬಿ.ಡಿ.ಎ ಸಮ್ಮಿಳಿತಗೊಳಿಸಿ ಪರಿಷ್ಕೃತ ಮೂಲ ವೇತನದ ಶೇ. 25 ರವನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು. ಇನ್ಕ್ರಿಮೆಂಟ್ ದರ ಪರಿಷ್ಕೃತ ಮೂಲ ವೇತನದ ಶೇ.3 ಇರಬೇಕು. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ಒಮ್ಮೆ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರು- ಮೈಸೂರು ನಡುವೆ ವಾಣಿಜ್ಯ ಸೇವೆ ಆರಂಭಿಸಿದ KSRTC ಎಲೆಕ್ಟ್ರಿಕ್ ಬಸ್: ಏನೆಲ್ಲಾ ಸೌಲಭ್ಯವಿದೆ..?

ನೌಕರರಿಗೆ ವಿಧಿಸಿದ ಷರತ್ತು ರದ್ದುಗೊಳಿಸಿ: ಚಾಲಕ, ನಿರ್ವಾಹಕರು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿಗಳಿಗೂ ಮತ್ತು ಇತರ ಎಲ್ಲಾ ನೌಕರರಿಗೂ, ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ ಭತ್ಯೆಗಳನ್ನು ಐದು ಪಟ್ಟು ಹೆಚ್ಚಿಸಬೇಕು. ಹೊಲಿಗೆ ಭತ್ಯೆ, ಷೂ, ಜೆರ್ಸಿ, ರೈನ್ ಕೋಟ್ ಇತ್ಯಾದಿಗಳಿಗೆ ಕೊಡಲಾಗುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು. ಎಲ್ಲಾ ನಿರ್ವಾಹಕರಿಗೆ ಕ್ಯಾಷಿಯರ್ ಗಳಿಗೆ ಸಮಾನವಾದ ಕ್ಯಾಷ್ ಆಲೋವೆನ್ಸ್  ನೀಡಬೇಕು. ಮುಷ್ಕರ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೆ, ಮರು ನೇಮಕ ಮಾಡಬೇಕು. ಲೋಕ ಅದಾಲತ್ ನಲ್ಲಿ ಷರತ್ತುಗಳನ್ನು ಒಪ್ಪಿ ಸೇವೆಗೆ ಮರು ನೇಮಕಗೊಂಡಿರುವ ನೌಕರರಿಗೆ ಹಿಂದಿನ ದಿನಾಂಕದಿಂದ ಅನ್ವಯವಾಗುವಂತೆ ಷರತ್ತುಗಳನ್ನು ರದ್ದು ಪಡಿಸಬೇಕು. ಮುಷ್ಕರದ ಸಂದರ್ಭದಲ್ಲಿ ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮಾತೃ ಮೂಲ ಘಟಕಕ್ಕೆ ವಾಪಸ್‌ ತರಬೇಕು ಎಂದು ಒತ್ತಾಯಿಸಿದ್ದರು.

Follow Us:
Download App:
  • android
  • ios