Chitradurga: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕೋಟೆ ನಾಡಿನಲ್ಲಿ ಪ್ರತಿಭಟನೆ!
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ವರದಿ: ಕಿರಣ್ಎಲ್.ತೊಡರನಾಳ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿತ್ರದುರ್ಗ
ಚಿತ್ರದುರ್ಗ (ನ.29): ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಜಾತಿಗೆ ಉದ್ಯೋಗ, ಶಿಕ್ಷಣದಲ್ಲಿ ಕಲ್ಪಿಸಿರುವ ಶೇಕಡ 15% ರಷ್ಟು ಮೀಸಲಾತಿ ಪರಿಶಿಷ್ಟ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸಮನಾಗಿ ಹಂಚಿಕೆಯಾಗಿಲ್ಲ. ಈ ತಾರತಮ್ಯ ನಿವಾರಣೆಗಾಗಿ ಕಳೆದ 30 ವರ್ಷಗಳಿಂದ ಸಂಘಟನೆಯ ಹೋರಾಟದ ಫಲವಾಗಿ 2005 ರಲ್ಲಿ ಎ.ಜೆ.ಸದಾಶಿವ ಆಯೋಗ ರಚೆನೆಯಾಗಿತ್ತು. ಆದರೆ ಆ ವರದಿಯನ್ನು ಜಾರಿಗೊಳಿಸದೆ ಸರ್ಕಾರಗಳು ನಿರಾಸಕ್ತಿ ತೋರುತ್ತಿವೆ.
ಅದೇ ರೀತಿ ಕಾಂತರಾಜ್ ಆಯೋಗದ ವರದಿಯನ್ನು ಕೂಡ ಒಂದು ಜಾತಿಗೆ ಸೀಮಿತವಾಗಿದ್ದುಕೊಂಡು ನ್ಯಾಯವನ್ನು ಕತ್ತಲೆಯಲ್ಲಿಡುವ ಪ್ರಯತ್ನವಾಗಿದೆ. ಈ ನಿಲುವನ್ನು ಕೈಬಿಟ್ಟು ಎಲ್ಲಾ ಜಾತಿಯ ಜನರ ಜನಸಂಖ್ಯಾ ಆಧರಿಸಿ ಮೀಸಲಾತಿ ಹಂಚಿಕೆ ಮಾಡುವಲ್ಲಿ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು.ನಿ.ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು. ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ಪರಿಶಿಷ್ಟ ಒಳ ಮೀಸಲಾತಿ ವರ್ಗಿಕರಣಕ್ಕೆ ಮುಂದಾಗಬೇಕು.
ನೇಜಾರು ಕಗ್ಗೊಲೆ ಆರೋಪಿಗೆ ಗಲ್ಲುಶಿಕ್ಷೆಯೇ ಆಗಬೇಕು: ಅಬ್ದುಲ್ ಅಜೀಂ
2008 ರಲ್ಲಿ ಉಷಾ ಮೆಹ್ರ ಸಮಿತಿ ನೀಡಿರುವ ವರದಿಯಂತೆ ಸಂವಿಧಾನದ ಅನುಚ್ಛೇದ 341 ಕ್ಕೆ ತಿದ್ದುಪಡಿ. 341/3ನ್ನು ಸೇರಿಸಿ ಒಳಮೀಸಲಾತಿ ಅನುಷ್ಟಾನ ಮಾಡಿ ಸಂವಿಧಾನ ಷೆಡ್ಯೂಲ್-9 ರಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸುಪ್ರಿಂ ಕೋರ್ಟ್ 7 ನ್ಯಾಯಾಧೀಶರ ಪೀಠದಲ್ಲಿರುವ ವಿವಿಧ ರಾಜ್ಯಗಳ ಒಳಮೀಸಲಾತಿ ಪ್ರಕರಣಗಳ ಪರವಾಗಿ ಕೇಂದ್ರ ಸರ್ಕಾರ ಬಲವಾಗಿ ವಾದ ಮಂಡಿಸಿ ಒಳ ಮೀಸಲಾತಿ ವರ್ಗಿಕರಿಸಬೇಕು. ಕಾಂತರಾಜ್ ಆಯೋಗದ ವರದಿಯನ್ನು ಸದನದಲ್ಲಿ ಚರ್ಚಿಸಿ ಅಂಗೀಕರಿಸಿ ಜನಸಂಖ್ಯೆ ಗನುಗುಣವಾಗಿ ಮೀಸಲಾತಿ ಹಂಚಿಕೆಯಾಗಲಿ.
ರಿಪೇರಿ ಮಾಡದಷ್ಟು ಹದಗೆಟ್ಟಿರುವ ಬಿಜೆಪಿ ಪಕ್ಷ: ಜಗದೀಶ್ ಶೆಟ್ಟರ್
ನಿ.ನ್ಯಾ. ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಟಾನ ಮಾಡಿ ಸಂವಿಧಾನದ ಷೆಡ್ಯೂಲ್-9 ರಲ್ಲಿ ಸೇರಿಸಬೇಕು. ಮೀಸಲಾತಿ ಪ್ರಮಾಣವನ್ನು ಶೇಕಡ 75% ಕ್ಕೆ ಹೆಚ್ಚಿಸಬೇಕು. ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ವರ್ಗದ ವಿದ್ಯಾರ್ಥಿ ನಿಲಯಗಳನ್ನು ಹೆಚ್ಚಿಸಬೇಕು. ಹಾಗೂ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಗಳನ್ನು ಹೆಚ್ಚಿಸಬೇಕು ಎಂದು ಆಹ್ರಹಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ, ಸಂಘಟನೆಯ ವಿಭಾಗೀಯ ಕಾರ್ಯದರ್ಶಿ ನೇಹ ಮಲ್ಲೇಶ್ ತಾಲ್ಲೂಕು ಅಧ್ಯಕ್ಷ ಡಿ.ವೀರಭದ್ರಪ್ಪ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ದಾದಾಪೀರ್, ಡಿ.ಶಿವಣ್ಣ, ಜಾಕೀರ್ ಹುಸೇನ್ ಸೇರಿದಂತೆ ಇತರರು ಭಾಗವಹಿಸಿದ್ದರು.