ಕಾಡಂಚಿನ ಹಳ್ಳಿಗಳಿಗೆ ಹಗಲಲ್ಲೇ 3 ಫೇಸ್ ವಿದ್ಯುತ್ ಕೊಡಿ: ಸಚಿವ ಈಶ್ವರ ಖಂಡ್ರೆ
ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸಲು ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಬೆಂಗಳೂರು (ನ.15): ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸಲು ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರವೇ 3 ಫೇಸ್ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ.
ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್‌ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ರಾತ್ರಿಯ ವೇಳೆ ಸಂಚರಿಸುವ ಕಾರಣ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ ಬೆಳಗಿನ ಹೊತ್ತು 3 ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಹೀಗಾಗಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಸದಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೋರಿದ್ದಾರೆ. ಜತೆಗೆ ಈ ಸಂಬಂಧ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟವಾಗಲಿದೆ: ಸಚಿವ ಈಶ್ವರ ಖಂಡ್ರೆ
ಅಜ್ಞಾನದ ಕತ್ತಲೆ ಕಳೆದು ಸುಜ್ಞಾನ ಬೆಳೆಸಿಕೊಳ್ಳೋಣ: ದೀಪಾವಳಿಯ ದಿನದಂದೆ ಬಾಲಯೇಸುವಿನ ಪುಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ನಾವೆಲ್ಲರೂ ನಮ್ಮಲ್ಲಿಯ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನ ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಬಾಲಯೇಸು ಪುಣ್ಯಕ್ಷೆತ್ರದಲ್ಲಿ, ಭಾನುವಾರ 40ನೇ ವರ್ಷದ ಮಾಣಿಕ್ಯ ಮಹೋತ್ಸವ ನಿಮಿತ್ತ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಅವರು, ಬಡತನ ರೇಖೆಗಿಂತ ಕೆಳಗಿನವರನ್ನು ಗುರುತಿಸಿ ಅವರಿಗೆ ಮೇಲೆತ್ತುವ ಕಾರ್ಯ ಕ್ರಿಶ್ಚಿಯನ್ ಮಷಿನರಿಯಿಂದ ಆಗುತ್ತಿದೆ.
ಎಲ್ಲರೂ ಸುಖ ಶಾಂತಿ ನೆಮ್ಮದಿಯಿಂದ ಬದುಕುವಂತೆ ಮಾಡುತ್ತಿರುವ ಕ್ರಿಶ್ಚಿಯನ್ ಮಷಿನರಿಗಳ ಕಾರ್ಯ ಮಾದರಿಯಾಗಿದೆ ಎಂದರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿರುವ ಸರ್ಕಾರವಾಗಿದೆ. ಚುನಾವಣೆ ಮೊದಲು ಹೇಳಿದ ಎಲ್ಲಾ ಗ್ಯಾರಂಟಿಗಳನ್ನು ಕೆಲವೇ ದಿನಗಳಲ್ಲಿ ಈಡೇರಿಸಲಾಗಿದೆ. ಜನವರಿಯಲ್ಲಿ ನಮ್ಮ ಐದನೇ ಗ್ಯಾರಂಟಿ ನಿರುದ್ಯೋಗ ಭತ್ಯೆಯೂ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು. ಎಲ್ಲರೂ ಪ್ರೀತಿಯಿಂದ ಇರಬೇಕು ಎನ್ನುವುದು ಯೇಸುವಿನ ಮೂಲ ಉದ್ದೇಶ, ಈ ನಿಟ್ಟಿನಲ್ಲಿ ಯೇಸು ಕ್ರಿಸ್ತನು ತನ್ನನ್ನು ಶಿಲುಬಿಗೇರಿಸಿದವರಿಗೆ ಕ್ಷಮಿಸಿದ್ದಾರೆ.
ಇಂಡಿಯಾ ಒಕ್ಕೂಟಕ್ಕಾಗಿ ತಮಿಳುನಾಡಿಗೆ ಕಾವೇರಿ ನೀರು: ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ
ಆದರೆ ಇಂದು ಜಗತ್ತಿನಲ್ಲಿ ಧರ್ಮದ ಹೆಸರಿನಲ್ಲಿ ಯುದ್ಧ ನಡೆಯುತ್ತಿದೆ. ನಾವೆಲ್ಲರೂ ಸೇರಿ ಸುಂದರ ಸಮಾಜ ನಿರ್ಮಿಸಬೇಕಿದೆ ಎಂದು ಹೇಳಿದರು. ಧರ್ಮಾಧಿಕಾರಿ ರಾಬರ್ಟ ಮೈಕಲ್ ಮಿರಾಂಡಾ ಮಾತನಾಡಿ, ಕ್ಷೇತ್ರದ ಶಾಸಕರೂ ಹಾಗು ಸಚಿವರಾದ ಈಶ್ವರ ಖಂಡ್ರೆಯವರು ಮೊದಲಿನಿಂದಲೂ ಕ್ರೈಸ್ತ ಮಿಷನರಿಗಳಿಗೆ ಸಹಾಯ ಮಾಡುತ್ತಾ ಬಂದಿದ್ದಾರೆ. ಇನ್ನು ಮುಂದೆಯೂ ಕ್ರೈಸ್ತ ಸಮಾಜದ ಮುಖಂಡರಿಗೆ ರಾಜಕೀಯವಾಗಿ ಮುನ್ನಡೆಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.