Asianet Suvarna News Asianet Suvarna News

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಾತ್ಮಕ ಹೇಳಿಕೆ; ಪ್ರಮೋದ್ ಮುತಾಲಿಕ್ ವಿರುದ್ಧ ಎಫ್‌ಐಆರ್!

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಆರೋಪ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲು.

Provocative statement at Hubli Eidgah Maidan FIR against Pramod Muthalik at hubballi rav
Author
First Published Sep 21, 2023, 7:28 PM IST

ಹುಬ್ಬಳ್ಳಿ (ಸೆ.21): ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಆರೋಪ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲು.

ಇಂದು ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆ ವೇಳೆ ಮೈದಾನಕ್ಕೆ ಭೇಟಿ ನೀಡಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುತಾಲಿಕ್ ಮಾತನಾಡುವ ವೇಳೆ ಇತರ ಧರ್ಮದ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಹಿನ್ನೆಲೆ ದೂರು.

ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲಿಸಿರುವ ಮಹಾನಗರ ಪಾಲಿಕೆ ವಲಯ 8 ರ ಸಹಾಯ ಆಯುಕ್ತ ಚಂದ್ರಶೇಖರಗೌಡರಿಂದ ದೂರು. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ  ಕಲಂ 153(ಎ), 295(ಎ) ಐಪಿಸಿ ಅಡಿ  ಪ್ರಕರಣ ದಾಖಲು. ಪ್ರಕರಣ ದಾಖಲಿಸಿಕೊಂಡ ಬಳಿಕ ತನಿಖೆ ನಡೆಸಲು ಮುಂದಾಗಿರುವ ಠಾಣಾ ಪಿಎಸ್ ಐ ಕವಿತಾ. ಎಸ್ಎಂ. 

ಗುಲಾಮಗಿರಿ ಹೆಸರು ಇಟ್ಟುಕೊಳ್ಳುವುದು ಅವಮಾನ, ‘ರಿಪಬ್ಲಿಕ್‌ ಆಫ್‌ ಭಾರತ’ ಹೆಸರು ಸ್ವಾಗತಾರ್ಹ: ಮುತಾಲಿಕ್‌

Follow Us:
Download App:
  • android
  • ios