ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕೆ. ಹರೀಶ್‌ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಬೆಂಗಳೂರು (ಜ.20): ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಕೆ. ಹರೀಶ್‌ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಜಾಮೀನು ಕೋರಿ ನ್ಯಾಯಾಂಗ ಬಂಧನದಲ್ಲಿರುವ ಪ್ರಕರಣದ 34ನೇ ಆರೋಪಿ ಕೆ. ಹರೀಶ್‌ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನ್ಯಾಯಪೀಠ ಆದೇಶಿಸಿದೆ. ವಿಚಾರಣೆ ವೇಳೆ ಸಿಐಡಿ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನಕುಮಾರ್‌, ಪಿಎಸ್‌ಐ ನೇಮಕಾತಿ ಅಕ್ರಮ ಮಧ್ಯಪ್ರದೇಶದ ವ್ಯಾಪಂ ಮಾದರಿಯ ಹಗರಣವಾಗಿದೆ. ಸರ್ಕಾರಿ ಅಧಿಕಾರಿಗಳು, ಹಿರಿಯ ಐಪಿಎಸ್‌ ಅಧಿಕಾರಿಗಳು ಸೇರಿದಂತೆ ಅತ್ಯಂತ ಪ್ರಭಾವಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಸ್ಟ್ರಾಂಗ್‌ ರೂಂನಲ್ಲಿದ್ದ ಸೇಫ್ಟಿಲಾಕರ್‌ ತೆರೆದು, ಉತ್ತರ ಪತ್ರಿಕೆಗಳನ್ನು ತಿದ್ದಿದ್ದಾರೆ. ಈ ಪರಿಸ್ಥಿತಿಯಲ್ಲಿ ಅರ್ಜಿದಾರ ಆರೋಪಿಗೆ ಜಾಮೀನು ದೊರೆತರೆ ತನಿಖೆಯಲ್ಲೂ ಹಸ್ತಕ್ಷೇಪ ಮಾಡಬಹುದು ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಸಿಐಡಿ ವಾದವನ್ನು ಪುರಸ್ಕರಿಸಿದ ಹೈಕೋರ್ಟ್ ಅರ್ಜಿದಾರನಿಗೆ ಜಾಮೀನು ನಿರಾಕರಿಸಿದೆ.

ಅರ್ಜಿದಾರ ಹರೀಶ್‌ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಸ್‌ಐ ಆಗಿದ್ದರು. ಪರೀಕ್ಷೆಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿ ಪ್ರಕರಣದ 14ನೇ ಆರೋಪಿ ಆರ್‌. ಮಧು ಹಾಗೂ 16ನೇ ಆರೋಪಿ ದಿಲೀಪ್‌ ಕುಮಾರ್‌ (ಅಭ್ಯರ್ಥಿಗಳು) ಅವರಿಂದ ತಲಾ 30 ಲಕ್ಷ ರು. ಸ್ವೀಕರಿಸಿದ್ದರು. 29ನೇ ಆರೋಪಿಯಾದ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಡಿ. ಹರ್ಷನಿಗೆ ಅಭ್ಯರ್ಥಿಗಳ ಕಾರ್ಬನ್‌ ಒಎಂಆರ್‌ ಹಾಗೂ ಹಣ ಶೀಟ್‌ ತಲುಪಿಸಿದ್ದರು. 14 ಹಾಗೂ 16ನೇ ಆರೋಪಿಗಳ ಒಎಂಆರ್‌ ಶೀಟ್‌ ತಿದ್ದಿರುವುದು ಎಫ್‌ಎಸ್‌ಎಲ್‌ ವರದಿಯಲ್ಲಿ ಸಾಬೀತಾಗಿದೆ ಎಂದು ಸಿಐಡಿಯ ದೋಷಾರೋಪಪಟ್ಟಿಯಲ್ಲಿ ಉಲ್ಲೇಖವಾಗಿದೆ.

Bengaluru: 1 ಪೀಸ್‌ ಕಬಾಬ್‌ ಕಮ್ಮಿಕೊಟ್ಟ ಹೋಟೆಲ್‌ ಮಾಲೀಕನಿಗೆ ಥಳಿತ

ಕೆಪಿಟಿಸಿಎಲ್‌ ಅಕ್ರಮ: ಮತ್ತೋರ್ವ ಬಂಧನ, 51ಕ್ಕೇರಿಕೆ
ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ನಡೆಸಲಾಗಿರುವ ಕೆಪಿಟಿಸಿಎಲ್‌ ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಡಿವೈಸ್‌ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ತಮ್ಮ ಸಮರ ಮುಂದುವರಿಸಿದ್ದು, ಮೈಕ್ರೋಚಿಪ್‌ ಉಪಯೋಗಿಸಿ ಪರೀಕ್ಷೆ ಬರೆಯಲು ಸಹಕಾರ ನೀಡಿದ್ದ ವ್ಯಕ್ತಿಯನ್ನು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.

18 ದಿನಗಳಲ್ಲಿ ಕೋಟಿ ಮೌಲ್ಯದ ಚಿನ್ನ ವಶ: ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚಿದ ಗೋಲ್ಡ್ ಸ್ಮಗ್ಲಿಂಗ್!

ಗೋಕಾಕ ತಾಲೂಕಿನ ಉಪ್ಪಾರಟ್ಟಿಗ್ರಾಮದ ಹನಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ. ಈತ 2022 ಆಗಸ್ಟ್‌ 7ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ನಡೆಸಲಾಗಿರುವ ಕೆಪಿಟಿಸಿಎಲ್‌ ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಯುಳ್ಳ ಡಿವೈಸ್‌ಗಳನ್ನು ಉಪಯೋಗಿಸಿ ಪರೀಕ್ಷೆ ಬರೆಯಲು ಸಹಕಾರ ನೀಡಿದ್ದಾನೆ. ಅಲ್ಲದೇ ಈ ಪರೀಕ್ಷಾ ಅಕ್ರಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ್‌ ಪಾಟೀಲ ಅವರು, ಅಕ್ರಮದಲ್ಲಿ ಪಾಲ್ಗೊಂಡ ಹಾಗೂ ಈ ಜಾಲಕ್ಕೆ ಸಂಪರ್ಕ ಹೊಂದಿದವರನ್ನು ಹೆಡೆಮುರಿ ಕಟ್ಟುವ ಕಾರ್ಯವನ್ನು ತಮ್ಮ ತಂಡದೊಂದಿಗೆ ಮುಂದುವರಿಸಿದ್ದಾರೆ. ಈ ಕುರಿತು ಗೋಕಾಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.