ಬೆಂಗಳೂರು :  ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮುಂದೂಡಲಾಗಿದ್ದ ‘ಪೊಲಿಯೋ ಲಸಿಕಾ ಕಾರ್ಯಕ್ರಮ’ದ ದಿನಾಂಕವನ್ನು ಆರೋಗ್ಯ ಇಲಾಖೆ ಪ್ರಕಟಿಸಿದ್ದು, ಮಾರ್ಚ್ 10ರಂದು ರಾಜ್ಯಾದ್ಯಂತ ಲಸಿಕಾ ಕಾರ್ಯಕ್ರಮ ನಡೆಯಲಿದೆ. 

ರಾಜ್ಯಾದ್ಯಂತ ಫೆಬ್ರವರಿ 3ರಂದು ನಡೆಯಬೇಕಿದ್ದ ಪೊಲಿಯೋ ಲಸಿಕಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. 

ಇದೀಗ ಹೊಸ ದಿನಾಂಕ ಪ್ರಕಟಿಸಿದ್ದು, ಮಾ.10ರಂದು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.