ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ಪೂರೈಕೆಗೆ ಆಮ್‌ ಆದ್ಮಿ ಪಕ್ಷದ ನೇತೃತ್ವದ ಪಂಜಾಬ್‌ ಸರ್ಕಾರ ಸಿದ್ಧವಿದೆ ಎಂದು ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ. ಈ ಸಂಬಂಧ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು (ಜೂ.20) : ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ಪೂರೈಕೆಗೆ ಆಮ್‌ ಆದ್ಮಿ ಪಕ್ಷದ ನೇತೃತ್ವದ ಪಂಜಾಬ್‌ ಸರ್ಕಾರ ಸಿದ್ಧವಿದೆ ಎಂದು ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ. ಈ ಸಂಬಂಧ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿರುವುದು ಅಶ್ಚರ್ಯ ಮತ್ತು ದುಃಖದ ಸಂಗತಿಯಾಗಿದೆ. ನಮ್ಮ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಮ್ಮ ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಕ್ಕಿ ಪೂರೈಕೆ ವಿಚಾರವಾಗಿ ನಾನು ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರೊಂದಿಗೆ ಭಾನುವಾರ ಕರೆ ಮಾಡಿ ಮಾತನಾಡಿದ್ದೇನೆ. ನಮ್ಮ ಮನವಿಗೆ ಪಂಜಾಬ್‌ ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಬಿದ್ದರೆ ಪಂಜಾಬ್‌ನಿಂದ ರಾಜ್ಯದಲ್ಲಿನ ಅಕ್ಕಿ ಕೊರತೆಯನ್ನು ಪೂರೈಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಆಶ್ವಾಸನೆಗಳು ಆಮ್‌ ಆದ್ಮಿ ಪಕ್ಷದ ನಕಲು: ಬ್ರಿಜೇಶ್‌ ಕಾಳಪ್ಪ ವ್ಯಂಗ್ಯ

ನಮ್ಮ ರಾಜ್ಯದ ಜನರ ಆಹಾರ ಭದ್ರತೆಯ ಹಿತದೃಷ್ಟಿಯಿಂದ ತನ್ನ ಪಾತ್ರ ನಿಭಾಯಿಸಲು ಬದ್ಧವಾಗಿದೆ. ಆದರಿಂದ ದಯವಿಟ್ಟು ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ಯಲು ಕೋರುತ್ತೇನೆ. ನಿಮಗೆ (ಮುಖ್ಯಮಂತ್ರಿ ಸಿದ್ದರಾಮಯ್ಯ) ಅವರಿಗೆ ನಾವು ಸಂಪೂರ್ಣ ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಪೂರ್ವ ಸಿದ್ಧತೆ ಇಲ್ಲದೆ ಜಾರಿ:

ಇದೇ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಯಾವುದೇ ಪೂರ್ವ ಸಿದ್ಧತೆಗಳಿಲ್ಲದೆ ವೋಚ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ತರಾತುರಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ ಎಂದು ಕಟುವಾಗಿ ಟೀಕಿಸಿದರು.

ಅಕ್ಕಿ ಕೊಡುತ್ತೇವೆಂದು ಒಪ್ಪಿ ಈಗ ಕೈ ಕೊಟ್ಟ ಕೇಂದ್ರ ಸರ್ಕಾರ: ಸಿಎಂ ಸಿದ್ದು ಗಂಭೀರ ಆರೋಪ

ಗ್ಯಾರಂಟಿ ಯೋಜನೆಗಳು ಆಮ… ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಸಂಪೂರ್ಣ ನಕಲು ಮಾಡಲಾಗಿದೆ. ಈ ಅರೆ ಬೆಂದ ಗ್ಯಾರಂಟಿಗಳಿಂದಾಗಿ ರಾಜ್ಯದ ಬಡ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿರುವ ಸಂದರ್ಭದಲ್ಲಿ ಯಾವುದೇ ರಾಜಕೀಯ ಕಿಡಿಗೇಡಿತನಕ್ಕೆ ಕೈ ಹಾಕುವುದಿಲ್ಲ. ಈಗ ತಲೆದೋರಿರುವ ರಾಜ್ಯದ ಬಡ ಜನತೆಯ ಸಂಕಷ್ಟವನ್ನು ನಿವಾರಿಸುವುದು ನಮ್ಮ ಪಕ್ಷದ ಗುರಿ ಎಂದು ತಿಳಿಸಿದರು.