ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ವಿಜಯಪುರ ಮೂಲದ ಶಾಂತಗೌಡ ಪಾಟೀಲ ಎಂದು ಗುರುತಿಸಲಾಗಿದ್ದು, ಘಟನೆಯಿಂದ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಇದೀಗ ಪುನರಾರಂಭಗೊಂಡಿದೆ.

ಬೆಂಗಳೂರು (ಡಿ.5): ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಟ್ರ್ಯಾಕ್‌ಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತದೇಹ ಹೊರತೆಗೆದಿದ್ದು, ಈ ಘಟನೆಯಿಂದಾಗಿ ಸ್ಥಗಿತಗೊಂಡಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರವು ಇದೀಗ ಪುನಃ ಸಹಜ ಸ್ಥಿತಿಗೆ ಮರಳಿದೆ.

ವಿಜಯಪುರ ಮೂಲದ ಶಾಂತಗೌಡ ಪಾಟೀಲ್ ಮೃತ ವ್ಯಕ್ತಿ:

ಮೆಟ್ರೋ ಹಳಿಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಗೌಡ ಪಾಟೀಲ ಎಂದು ಗುರುತಿಸಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯವರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಪೊಲೀಸರು ಶಾಂತಗೌಡ ಪಾಟೀಲ ಅವರ ವೃತ್ತಿ ಮತ್ತು ಆತ್ಮ೧ಹತ್ಯೆಗೆ ಕಾರಣವೇನು ಎಂಬ ಕುರಿತು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭ

ಕೆಂಗೇರಿ ನಿಲ್ದಾಣದಲ್ಲಿ ದುರ್ಘಟನೆ ಸಂಭವಿಸಿದ ಹಿನ್ನೆಲೆಯಲ್ಲಿ, ನೇರಳೆ ಮಾರ್ಗದ ಮೈಸೂರು ರಸ್ತೆಯಿಂದ ಚಲ್ಲಘಟ್ಟದವರೆಗಿನ ಮೆಟ್ರೋ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಮೃತದೇಹವನ್ನು ಹೊರತೆಗೆದು ರವಾನಿಸಿದ ಬೆನ್ನಲ್ಲೇ, ಮೆಟ್ರೋ ಅಧಿಕಾರಿಗಳು ತಾಂತ್ರಿಕ ಪರಿಶೀಲನೆ ನಡೆಸಿ ಸಂಚಾರವನ್ನು ಪುನಃ ಆರಂಭಿಸಿದ್ದಾರೆ.

ಪ್ರಯಾಣಿಕರು ಸ್ವಲ್ಪ ಸಮಯದವರೆಗೆ ಎದುರಿಸಿದ ತೊಂದರೆಯ ನಂತರ, ಇದೀಗ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಸಂಪೂರ್ಣವಾಗಿ ಮೈಸೂರು ರಸ್ತೆಯಿಂದ ಚಲ್ಲಘಟ್ಟದವರೆಗೆ ರೈಲುಗಳು ಓಡಾಡಲು ಪ್ರಾರಂಭಿಸಿವೆ.