ಬೆಂಗಳೂರು :  ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ತಲೆಕೆಡಿಸಿಕೊಳ್ಳದ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ತಮ್ಮ ಇಲಾಖಾ ಅಧಿಕಾರಿಗಳೊಂದಿಗೆ ವಿದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. 

ಮೈತ್ರಿ ಸರ್ಕಾರಕ್ಕೆ ಬಿಜೆಪಿಯ ಆಪರೇಷನ್‌ ಕಮಲ ಭೀತಿ ಒಂದೆಡೆಯಾದರೆ, ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ ರಾಜಕಾರಣದಲ್ಲಿ ತೊಡಗಿದ್ದಾರೆ. ಇದಾವುದರ ಬಗ್ಗೆ ತಲೆಕೆಡಿಸಿಕೊಳ್ಳದೆ ಆಸ್ಪ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಶನಿವಾರ ಆಸ್ಪ್ರೇಲಿಯಾ ಪ್ರವಾಸ ಕೈಗೊಂಡಿರುವ ರೇವಣ್ಣ ಜ.25ರಂದು ತಾಯ್ನಾಡಿಗೆ ಮರಳಲಿದ್ದಾರೆ. 

ರಾಜ್ಯ ರಾಜಕೀಯ ಜಂಜಾಟದಿಂದ ಒಂದು ವಾರ ದೂರ ಇದ್ದು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಲಿದ್ದಾರೆ. ಜೆಡಿಎಸ್‌ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿದ್ದು, ಆಪರೇಷನ್‌ ಕಮಲದ ಭೀತಿ ಇಲ್ಲ. ಹೀಗಾಗಿ ನಿರಾಂತಕವಾಗಿ ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.