ವೃದ್ಧರಿಗೆ ದೇಗುಲಗಳಲ್ಲಿ ಶೀಘ್ರ ದರ್ಶನ ವ್ಯವಸ್ಥೆ ಶುರು: ಸಚಿವ ರಾಮಲಿಂಗಾರೆಡ್ಡಿ

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿನ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದನ್ನಾಧರಿಸಿ ಶೌಚಾಲಯ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಇನ್ನಿತರ ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
 

Quick darshan system for elderly in temples started Says Minister Ramalinga Reddy gvd

ಬೆಂಗಳೂರು (ಜೂ.25): ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿನ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದನ್ನಾಧರಿಸಿ ಶೌಚಾಲಯ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಇನ್ನಿತರ ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಶನಿವಾರ ಹಿರಿಯ ನಾಗರಿಕರಿಗೆ ಶೀಘ್ರ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಕ್ಕೆ ಬರುವ 65 ವರ್ಷಕ್ಕಿಂತ ಮೇಲ್ಪಟ್ಟಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು, ನೇರವಾಗಿ ದೇವರ ದರ್ಶನ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಮುಜರಾಯಿ ಇಲಾಖೆಯ 205 ಎ ಕೆಟಗರಿ ಹಾಗೂ 193 ಬಿ ಕೆಟಗರಿ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ವಿಶೇಷ ದರ್ಶನ ವ್ಯವಸ್ಥೆ ಏರ್ಪಡಿಸಲಾಗುತ್ತಿದೆ. ಅರ್ಚಕರ ಸಂಘದಿಂದ ಈ ಕುರಿತು ಮನವಿ ಸಲ್ಲಿಕೆಯಾಗಿತ್ತು. ಅದನ್ನಾಧರಿಸಿ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.

ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ: ಸಾಹಿತಿಗಳ ಆತಂಕಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ

ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ 1 ಲಕ್ಷಕ್ಕೂ ಹೆಚ್ಚಿನ ಭಕ್ತರು ಆಗಮಿಸಿದ್ದರು. ಅದರಲ್ಲಿ 10 ಸಾವಿರಕ್ಕೂ ಹೆಚ್ಚಿನ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲಲು ಸಮಸ್ಯೆ ಅನುಭವಿಸುತ್ತಿದ್ದರು. ಅವರೆಲ್ಲರೂ ತಮ್ಮ ಆಧಾರ್‌ ಕಾರ್ಡ್‌ ತೋರಿಸಿ ಪ್ರತ್ಯೇಕ ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದಿದ್ದಾರೆ. ಅದೇ ಈಗ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಾಂಕೇತಿಕವಾಗಿ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಶೀಘ್ರದಲ್ಲಿ ಅಧಿಕೃತವಾಗಿ ಎಲ್ಲ ದೇವಸ್ಥಾನಗಳಲ್ಲೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಶಿರಾಡಿ ಘಾಟಲ್ಲಿ ಸುರಂಗ ಮಾರ್ಗ ಯೋಜನೆಗೆ ಸರ್ಕಾರ ಮರುಜೀವ: ಸಚಿವ ಸತೀಶ್‌ ಜಾರಕಿಹೊಳಿ

ದೇವಸ್ಥಾನಗಳ ಮೂಲಸೌಕರ್ಯ ಬಗ್ಗೆ ವರದಿ: ಮುಜರಾಯಿ ಇಲಾಖೆ ಅಡಿಯಲ್ಲಿ ಎ, ಬಿ, ಸಿ ಕೆಟಗರಿಯಲ್ಲಿ 3 ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳಿವೆ. ಅವುಗಳಲ್ಲಿ ಸೂಕ್ತ ಮೂಲಸೌಕರ್ಯ ವ್ಯವಸ್ಥೆ ಇಲ್ಲದಿರುವುದರ ಬಗ್ಗೆ ಹಲವು ದೂರುಗಳು ಬಂದಿವೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಸತಿ ವ್ಯವಸ್ಥೆ ಸೇರಿ ಮೂಲಸೌಕರ್ಯ ಕುರಿತಂತೆ ವರದಿ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರು ವರದಿ ನೀಡಿದ ನಂತರ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ಮಾಜಿ ಶಾಸಕ ಚಂದ್ರಶೇಖರ್‌, ಬಿಬಿಎಂಪಿ ಮಾಜಿ ಮೇಯರ್‌ಗಳಾದ ಕಟ್ಟೆಸತ್ಯನಾರಾಯಣ, ಮಾಜಿ ಸದಸ್ಯ ಉದಯ್‌ಶಂಕರ್‌ ಇತರರಿದ್ದರು.

Latest Videos
Follow Us:
Download App:
  • android
  • ios