ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್

ಬೆಂಗಳೂರು(ಆ.18):  ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಮುಡಾ ಹಗರಣ: ನಿಷ್ಪಕ್ಷಪಾತ ತನಿಖೆ ಅಗತ್ಯ, ಹೀಗಾಗಿ ಅನುಮತಿ, ರಾಜ್ಯಪಾಲ ಗೆಹಲೋತ್

ಬಿಎಸ್‌ವೈ ನಡೆ ಅನುಸರಿಸಿ:

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್‌ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.