ಹಾಸನದ ಹೊಸಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಲಾರಿ ಹರಿದು 10 ಜನರು ಮೃತಪಟ್ಟ ಘಟನೆ ರಾಜ್ಯಾದ್ಯಂತ ಆಘಾತ ಮೂಡಿಸಿದೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಹಾಸನ (ಸೆ.14) ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಲಾರಿ ಹರಿದು 10 ಜನರು ಮೃತಪಟ್ಟ ಪ್ರಕರಣ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಘಟನೆಯ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರ ದುಃಖದಲ್ಲಿ ಭಾಗಿಯಾದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಡಕುಟುಂಬಕ್ಕೆ ಇನ್ನಷ್ಟು ನೆರವು ನೀಡಲು ಆರ್ ಅಶೋಕ್ ಒತ್ತಾಯ:

ಅಪಘಾತ ಸ್ಥಳಕ್ಕೆ ಮತ್ತು ಗಾಯಳು ಇರುವ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದು ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಇಡೀ ರಾಜ್ಯದ ಜನತೆಗೆ ದಿಗ್ಭ್ರಮೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಸ್ಪಂದಿಸಿ ಪರಿಹಾರ ಘೋಷಿಸಿರುವುದು ಒಳ್ಳೆಯದು. ಆದರೆ, ಇದು ಸಾಕಾಗುವುದಿಲ್ಲ. ಬಡತನದಲ್ಲಿರುವ ಕುಟುಂಬಗಳಿಗೆ ಇನ್ನಷ್ಟು ನೆರವು ನೀಡಬೇಕೆಂದು ನಾನು ಸರ್ಕಾರದ ಜೊತೆ ಮಾತಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಅಪಘಾತದ ಕುರಿತು ಪ್ರತಿಕ್ರಿಯಿಸಿದ ಅವರು, ಪೊಲೀಸರು ಕ್ರಮ ಕೈಗೊಂಡಿದ್ದರೂ ಜನರ ಮೇಲೆ ಟ್ರಕ್ ಹರಿದಿದೆ. ಇಂತಹ ಮೆರವಣಿಗೆಗಳು ನಡೆಯಬೇಕಾದರೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಇರಬೇಕಾಗಿತ್ತು. ಸ್ಥಳೀಯರು ಹಲವು ಬಾರಿ ಹಂಪ್ ಹಾಕಬೇಕೆಂದು ಒತ್ತಾಯಿಸಿದ್ದರು. ನಾನು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ತಕ್ಷಣ ಹಂಪ್ ಹಾಕಲು ಸೂಚಿಸುತ್ತೇನೆ ಎಂದು ಹೇಳಿದರು.