ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ
ಹೊಸಪೇಟೆ (ಆ.26): ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ದಸರಾ ಉದ್ಘಾಟನೆ ವೇಳೆ ಬಾನು ಮುಷ್ತಾಕ್ ಅವರು ಚಾಮುಂಡಿ ದೇವಿಯ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಹಬ್ಬಕ್ಕೆ ಚಾಲನೆ ನೀಡುವ ಕುರಿತು ಪ್ರತಿಕ್ರಿಯಿಸಿ, ಚಾಮುಂಡೇಶ್ವರಿಗೆ ಅವರಿಂದ ಯಾಕೆ ಪೂಜೆ ಮಾಡಿಸಬೇಕು?. ಹಿಂದೂಗಳನ್ನು ವಿರೋಧ ಮಾಡೋರು ಚಾಮುಂಡೇಶ್ವರಿ ಪೂಜೆಯನ್ನು ಯಾಕೆ ಮಾಡಬೇಕು?. ನಮ್ಮ ಹಿಂದೂ ಧರ್ಮದಲ್ಲಿ ಯಾರು ಇಲ್ವಾ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಡಿಕೆಶಿ ಆರೆಸ್ಸೆಸ್ ಗೀತೆ ಹಾಡಿದರೆ ಬಿಜೆಪಿ ಪರ ಅಂತಾ ಅಲ್ಲ: ತನ್ವೀರ್
ಸಿದ್ದರಾಮಯ್ಯ ಸರ್ಕಾರ ಹಿಂದೂ ಧರ್ಮಕ್ಕೆ ಕಳಂಕ ತರುತ್ತಿದೆ. ಸಿದ್ದರಾಮಯ್ಯ ಅವರಿಗೆ ಟಿಪ್ಪು ಮನಸ್ಥಿತಿ ಇದೆ. ಹಾಗಾಗಿ, ಮುಸ್ಲಿಮರನ್ನು ಆಯ್ಕೆ ಮಾಡಿದ್ದಾರೆ ಎಂದರು.
ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ದಸರಾ ಉದ್ಘಾಟನೆ ವೇಳೆ ಬಾನು ಮುಷ್ತಾಕ್ ಅವರು ಚಾಮುಂಡಿ ದೇವಿಯ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.
