ಸಿಂಧನೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ. ಸಂತ್ರಸ್ತೆಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ರಾಯಚೂರು (ಜು.2): ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್ ನಂ-2ರಲ್ಲಿ 2019ರ ನವೆಂಬರ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕ್ಸೋ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಆರೋಪಿ ಅಮಲ್ ಮೊಹಲ್ದಾರ್ (40)ಗೆ 20 ವರ್ಷಗಳ ಸಜೆಯ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ನ್ಯಾಯಾಧೀಶ ಬಿ.ಬಿ.ಜಕಾತಿ ಆದೇಶ ಹೊರಡಿಸಿದ್ದಾರೆ.
ಜೊತೆಗೆ, ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ದಾಖಲಾದ ಈ ಪ್ರಕರಣದಲ್ಲಿ, ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪಿಐ ಬಾಲಚಂದ್ರ ಡಿ.ಲಕ್ಕಂ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಇದನ್ನೂ ಓದಿ: Actress Assault Case; ಪಲ್ಸರ್ ಸುನಿ ಜಾಮೀನು ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್
ನ್ಯಾಯಾಲಯದ ಈ ತೀರ್ಪು ಸಂತ್ರಸ್ತೆಗೆ ನ್ಯಾಯ ಒದಗಿಸಿದ್ದು, ಇಂತಹ ಘಟನೆಗಳ ವಿರುದ್ಧ ಕಠಿಣ ಕ್ರಮದ ಸಂದೇಶವನ್ನು ನೀಡಿದೆ.
