Asianet Suvarna News Asianet Suvarna News

Breaking Teacher death: ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ ಹೃದಯಾಘಾತಕ್ಕೆ ಬಲಿಯಾದ ಮುಖ್ಯ ಶಿಕ್ಷಕ

ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಾಠ ಮಾಡಿ ಸುಸ್ತಾಗುತ್ತಿದೆ ಎಂದು ಕುರ್ಚಿಯಲ್ಲಿ ಕುಳಿತಲ್ಲಿಯೇ ಮುಖ್ಯ ಶಿಕ್ಷಕ ಸುರೇಶ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Raichur government school teacher died from heart attack on duty sat
Author
First Published Dec 26, 2023, 6:44 PM IST

ರಾಯಚೂರು (ಡಿ.26): ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಿ ಸುಸ್ತಾಗುತ್ತಿದೆ ಎಂದು ಮುಖ್ಯ ಶಿಕ್ಷಕರ ಕೊಠಡಿಗೆ ಬಂದು ಕುರ್ಚಿಯಲ್ಲಿ ಕುಳಿತು ಕಡತಗಳನ್ನು ಪರಿಶೀಲನೆ ಮಾಡುವಾಗಲೇ ಹೃದಯಾಘಾತವಾಗಿ ಕುಳಿತಲ್ಲಿಯೇ ಪ್ರಾಣ ಬಿಟ್ಟಿರುವ ದುರ್ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 

ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪ್ರಭಾರ ಮುಖ್ಯ ಶಿಕ್ಷಕನಿಗೆ ಹೃದಯಘಾತ ಸಂಭವಿಸಿದ್ದು, ತಾವು ಕುಳಿತುಕೊಂಡ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿರುವ ದುರ್ಘಟನೆ ನಡೆಒದೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಪ್ರಭಾರ ಮುಖ್ಯ ಶಿಕ್ಷಕ ಸುರೇಶ (57) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಮೊದಲ ತರಗತಿ ಪಾಠ ಮುಗಿಸಿ, ಇಂದು ಯಾಕೋ ತುಂಬಾ ಸುಸ್ತಾಗುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿ ಮುಖ್ಯ ಶಿಕ್ಷಕರ ಕೋಣೆಯತ್ತ ಬಂದು ತಮ್ಮ ಕುರ್ಚಿಯಲ್ಲಿ ಕುಳಿತುಕೊಂಡಿದ್ದಾರೆ.

ಕೋಲಾರದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ: 17 ವರ್ಷದ ಮಗಳನ್ನು ಕೊಲೆಗೈದು ಸುಟ್ಟು ಹಾಕಿದ ಅಪ್ಪ!

ಇನ್ನು ಎದೆಯ ನೋವು ಕಾಣಿಸಿಕೊಂಡರೂ ಅದನ್ನು ನಿರ್ಲಕ್ಷ್ಯ ಮಾಡಿ, ಇತರೆ ದಾಖಲೆಗಳನ್ನು ಬರೆದಿಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಶಾಲೆಗೆ ಸಂಬಂಧಿಸಿದ ದಾಖಲೆ ಬರೆಯುವ ವೇಳೆ ಹೃದಯಘಾತ ಸಂಭವಿಸಿದೆ. ನಂತರ, ಕೆಲವೇ ಕ್ಷಣಗಳಲ್ಲಿ ಕುಳಿತ ಕುರ್ಚಿಯಲ್ಲೇ ಮುಖ್ಯ ಶಿಕ್ಷಕ ಸುರೇಶ್ ಪ್ರಾಣಬಿಟ್ಟಿದ್ದಾರೆ. ಸುರೇಶ್ ನಿಧನದಿಂದ ಶಾಲೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು. ಶಾಲೆ ವಿದ್ಯಾರ್ಥಿಗಳು, ಸಿಬ್ಬಂದಿ, ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ.

ರೈತರ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ ಖಡಕ್‌ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ಇನ್ನು ಮೃತ ಶಿಕ್ಷಕ ಸುರೇಶ್ ಮೂಲತಃ ರಾಣೆಬೆನ್ನೂರಿನವರು. ಸುರೇಶ್‌ ಅವರಿಗೆ ಪತ್ನಿ, ಮೂವರು ಪುತ್ರರಿದ್ದಾರೆ. ಎಲ್ಲ ಮಕ್ಕಳನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾ ಉತ್ತಮ ಪಾಠ ಪ್ರವಚನ ಮಾಡುತ್ತಿದ್ದರು. ಇನ್ನು ಮುಖ್ಯ ಶಿಕ್ಷಕರಿಲ್ಲದ ಕಾರಣ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಾ ಎಲ್ಲ ಶಿಕ್ಷಕರ ನೆಚ್ಚಿನ ಸ್ನೇಹಿತರೂ ಆಗಿದ್ದರು. ಇನ್ನು ಶಾಲೆಯಲ್ಲಿ ಹೆಚ್ಚುವರಿ ಕೆಲಸಗಳಿದ್ದರೆ ಅವುಗಳನ್ನು ತಾವೇ ನಿರ್ವಹಣೆ ಮಾಡುತ್ತಿದ್ದರು. ಆದರೆ, ಈಗ ಏಕಾಏಕಿ ಶಿಕ್ಚಕರು ಸಾವನ್ನಪ್ಪಿದ್ದರಿಂದ ಶಾಲೆ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.

Follow Us:
Download App:
  • android
  • ios