Asianet Suvarna News Asianet Suvarna News

ರಾಯಚೂರಲ್ಲಿ ಸ್ಕೂಲ್ ಬಸ್ ಭೀಕರ ಅಪಘಾತ ಪ್ರಕರಣ: ಕುರ್ಡಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಶರಣಪ್ರಕಾಶ್ ಪಾಟೀಲ್

ಮಾನ್ವಿ ತಾಲೂಕಿನ ಖಾಸಗಿ ಶಾಲಾ ವಾಹನ ಭೀಕರ ಅಪಘಾತಕ್ಕೊಳಗಾಗಿ ಇಬ್ಬರು ಮಕ್ಕಳು ದುರ್ಮರಣಕ್ಕೀಡಾದ ಹಿನ್ನೆಲೆ ಇಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್  ಕುರ್ಡಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Raichur loyola school bus accident case minister sharanprakash patil visits kurdi village at manvi taluku rav
Author
First Published Sep 6, 2024, 2:03 PM IST | Last Updated Sep 6, 2024, 2:03 PM IST

ರಾಯಚೂರು (ಸೆ.6): ಮಾನ್ವಿ ತಾಲೂಕಿನ ಖಾಸಗಿ ಶಾಲಾ ವಾಹನ ಭೀಕರ ಅಪಘಾತಕ್ಕೊಳಗಾಗಿ ಇಬ್ಬರು ಮಕ್ಕಳು ದುರ್ಮರಣಕ್ಕೀಡಾದ ಹಿನ್ನೆಲೆ ಇಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್  ಕುರ್ಡಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

  ಕುರ್ಡಿ ಗ್ರಾಮದ ಸಮರ್ಥ7), ಶ್ರೀಕಾಂತ್ (12) ಮೃತ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಕ್ಕಳು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಮೃತರ ಕುಟುಂಬಗಳಿಗೆ ಸರ್ಕಾರ ಘೋಷಿಸಿದ 5 ಲಕ್ಷ ರೂ ಚೆಕ್ ಪೋಷಕರಿಗೆ ವಿತರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಬಂದಿದ್ದೇವೆ. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತೇವೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಮಕ್ಕಳಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳು ವಿದ್ಯಾರ್ಥಿಗಳಿಗೆ ಸರ್ಕಾರವೇ ಚಿಕಿತ್ಸೆ ವೆಚ್ಚ ಭರಿಸಲಿದೆ. ರಸ್ತೆಯಲ್ಲಿ ಅಪಘಾತ ಹೇಗಾಯಿತು ಎಂಬ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

 

ರಾಯಚೂರು ಭೀಕರ ಅಪಘಾತ ಪ್ರಕರಣ; ರಿಮ್ಸ್ ಆಸ್ಪತ್ರೆಗೆ ಸಚಿವ ಶರಣಪ್ರಕಾಶ್ ಪಾಟೀಲ್ ಭೇಟಿ

ಅಪಘಾತ ನಡೆದ ಸ್ಥಳಕ್ಕೆ ಭೇಟಿ:

ಸಾರಿಗೆ ಬಸ್-ಶಾಲಾ ವಾಹನ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಮಾನ್ವಿ ತಾಲೂಕಿನ ಕಪಗಲ್ ಬಳಿ ರಾಜ್ಯ ಹೆದ್ದಾರಿ ರಸ್ತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ಕೆಲವರು ಕೆಲಕಾಲ ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಅಪಘಾತಕ್ಕೆ ರಸ್ತೆ ಗುಂಡಿಗಳೇ ಕಾರಣ. ಈ ಹಿಂದೆ ರಸ್ತೆಗುಂಡಿ ಮುಚ್ಚುವಂತೆ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಪಘಾತವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಸಚಿವರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಸಾರ್ವಜನಿಕರು ದೂರುಗಳನ್ನು ನೀಡಿದರು. ದೂರು ಸ್ವೀಕರಿಸಿದ ಸಚಿವರು. ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Latest Videos
Follow Us:
Download App:
  • android
  • ios