ಕನ್ನಡದಲ್ಲೂ ರೈಲ್ವೆ ಮುಂಬಡ್ತಿ ಪರೀಕ್ಷೆಗೆ ಅಸ್ತು: ರೈಲ್ವೆ ಸಚಿವ ಸೋಮಣ್ಣ ಮಹತ್ವದ ಘೋಷಣೆ
ರೈಲ್ವೆ ನೇಮಕ ಪರೀಕ್ಷೆ ಮಾತ್ರವಲ್ಲ, ಮುಂಬಡ್ತಿ ಪರೀಕ್ಷೆಗಳನ್ನೂ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ.
ನವದೆಹಲಿ (ಅ.04): ರೈಲ್ವೆ ನೇಮಕ ಪರೀಕ್ಷೆ ಮಾತ್ರವಲ್ಲ, ಮುಂಬಡ್ತಿ ಪರೀಕ್ಷೆಗಳನ್ನೂ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ಪ್ರಸ್ತುತ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿದ್ದು, ಇದೀಗ ಕನ್ನಡದಲ್ಲಿಯೂ ಪರೀಕ್ಷೆ ನಡೆಸಲಾಗುವುದರಿಂದ ಕರ್ನಾಟಕದ ಸಿಬ್ಬಂದಿಗಳಿಗೆ ಅನುಕೂಲವಾಗುವುದು ಎಂದು ಸಚಿವರ ಕಚೇರಿಯು ಪ್ರಕಟಣೆಯಲ್ಲಿ ಹೇಳಿದೆ.
ಈಗಾಗಲೇ ರೈಲ್ವೆ ಇಲಾಖೆ ಸೇರಲು ನಡೆಸುವ ಪರೀಕ್ಷೆ ಕನ್ನಡದಲ್ಲಿ ಸಹ ಬರೆಯಲು ಅವಕಾಶವಿದೆ. ಸಚಿವರ ಈ ಆದೇಶದಿಂದ ಇಲಾಖೆಗೆ ಸೇರಿದ ನಂತರ ಮುಂಬಡ್ತಿಗೆ ಸಹ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಅನೇಕ ಕನ್ನಡಿಗ ಸಿಬ್ಬಂದಿಗಳಿಗೆ ಇದು ವರಪ್ರದವಾಗಿದೆ ಎಂದು ಅದು ತಿಳಿಸಿದೆ.
ಇಬ್ಭಾಗವಾಗಿರುವ ರೈತ ಸಂಘಟನೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
2027 ರ ಜನವರಿಗೆ ನೇರರೈಲು ಮಾರ್ಗ ಕಾಮಗಾರಿ ಪೂರ್ಣ: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ 2027ರ ಜನವರಿಯೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಆಶ್ವಾಸನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ₹2140 ಕೋಟಿ ವೆಚ್ಚದಲ್ಲಿ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪಿಸಲಾಗಿದೆ.
ಈ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇ.50-50 ಅನುಪಾತದಲ್ಲಿ ಯೋಜನೆ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಇದನ್ನು ಬದಲಿಸಿ ರಾಜ್ಯ ಸರ್ಕಾರ ಭೂ ಸ್ವಾಧೀನ ವೆಚ್ಚವನ್ನು ಭರಿಸಿ, ಯೋಜನೆಗೆ ಭೂಮಿ ಹಸ್ತಾಂತರಿಸಿದರೆ ರೈಲ್ವೆ ಇಲಾಖೆಯಿಂದಲೇ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು. ಎರಡು ನೂತನ ರೈಲ್ವೆ ಮಾರ್ಗಗಳಿಗೆ 2409 ಎಕರೆ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಕೇವಲ 280 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರೈಲ್ವೆ ಮಾರ್ಗಕ್ಕೆ ಈಗಾಗಲೆ ₹1100 ಕೋಟಿ ಅನುದಾನ ಒದಗಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಧಾನಮಂತ್ರಿಗಳ ಸೂಚನೆಯಂತೆ 2027ರ ಜನವರಿ ವೇಳೆಗೆ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಮಾಡಿ, ಪ್ರಧಾನಮಂತ್ರಿ ಹಾಗೂ ರೈಲ್ವೆ ಖಾತೆ ಸಚಿವರಿಂದ ಲೋಕಾರ್ಪಣೆ ಮಾಡುವುದಾಗಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಮುಡಾ ಕೇಸ್‌ನಲ್ಲಿ ಸಾಕ್ಷ್ಯನಾಶ: ಸಿದ್ದರಾಮಯ್ಯ ವಿರುದ್ಧ ಇ.ಡಿ.ಗೆ 2ನೇ ಕಂಪ್ಲೇಂಟ್
ಪ್ರಸ್ತುತ ನೂತನ ರೈಲ್ವೆ ಮಾರ್ಗಗಳನ್ನು ನಿರ್ಮಾಣ ಮಾಡುವ ವೇಳೆ, ರೈಲ್ವೆ ಕೆಳ ಸೇತುವೆ ನಿರ್ಮಾಣದ ಬದಲಿಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವ ವಿ. ಸೋಮಣ್ಣ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆ ನೀರು ಸಂಗ್ರಹಗೊಂಡು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿರುವ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ರೈಲ್ವೆ ಕೆಳಸೇತುವೆ ದುರಸ್ತಿ ಕಾರ್ಯವನ್ನು ಸಂಸದ ಗೋವಿಂದ ಎಂ. ಕಾರಜೋಳ ಅವರ ಸಲಹೆ ಪಡೆದು, ರೈಲ್ವೆ ಕೆಳ ಸೇತುವೆಗಳ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.