ಡಿಸೆಂಬರ್ 7ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ 5 ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು (ಡಿ.2) : ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ 5 ದಿನಗಳವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈತರ ಬೆಳೆ ಕಟಾವಿಗೆ ಕಂಟಕವಾಗುವುದೇ 5 ದಿನ ನಿರಂತರ ಮಳೆ? ಹವಾಮಾನ ಇಲಾಖೆ ಎಚ್ಚರಿಕೆ!
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ,ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ಬಹುತೇಕ ಜಿಲ್ಲೆಗಳಲ್ಲಿ ಮಳೆ:
ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಡಿಸೆಂಬರ್ 7ರವರೆಗೆ 5 ದಿನಗಳ ಕಾಲ ಮಳೆ ರಾಜ್ಯಾದ್ಯಂತ ಮಳೆ ಸುರಿಯಲಿದೆ. ಇನ್ನು ಸಿಲಿಕಾನ್ ಸಿಟಿಯಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇರುವ ಹಿನ್ನೆಲೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿರುವ ಹವಾಮಾನ ಇಲಾಖೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಡಿಸೆಂಬರ್‌ನಲ್ಲಿ ಈ ಬೆಳೆ ಬೆಳೆಯಿರಿ: ರೈತರಿಗೆ ಸಲಹೆ
ಮೈಸೂರು: ಭಾರತೀಯ ಹವಾಮಾನ ಇಲಾಖೆಯ ಈ ವಾರದ ಮುನ್ಸೂಚನೆ ಪ್ರಕಾರ ಮೈಸೂರು ಜಿಲ್ಲೆಯಲ್ಲಿ ಡಿ.2 ರಿಂದ 6 ರವರೆಗೆ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಂಭವವಿಲ್ಲ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ, ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ಬೆಳೆಯಬಹುದಾದ ಬೆಳೆಗಳು- ನೆಲಗಡಲೆ- ಕೆ.ಬಿ.ಎಸ್.ಎಚ್- 41, 42, 44, 53. ಸೂರ್ಯಕಾಂತಿ- ಕೆಬಿ-79, ಕರುಣೆ, ಕೆ.ಬಿ.ಎಸ್-23, ಎಳ್ಳು- ಜಿಟಿ-1, ಟಿಎಂವಿ-3, ನವಿಲೆ-1..
ರೈತರ ಬೆಳೆ ಕಟಾವಿಗೆ ಕಂಟಕವಾಗುವುದೇ 5 ದಿನ ನಿರಂತರ ಮಳೆ? ಹವಾಮಾನ ಇಲಾಖೆ ಎಚ್ಚರಿಕೆ!
ಭತ್ತವನ್ನು ಕಟಾವು ಮಾಡುವುದಕ್ಕಿಂತ ಒಂದು ವಾರ ಮುಂಚಿತವಾಗಿ ಬಸಿಗಾಲುವೆಗಳನ್ನು ತೆಗೆದು ನೀರನ್ನು ಬಸಿಯಬೇಕು. ಬೆಳಗಿನ ಜಾವ ಹಾಗೂ ರಾತ್ರಿ ವೇಳೆ ವಾತಾವರಣದ ಉಷ್ಣಾಂಶದಲ್ಲಿ ಸ್ವಲ್ಪ ಇಳಿತ ಇರುವುದರಿಂದ ಜಾನುವಾರು, ರೇಷ್ಮೆ ಹಾಗೂ ಕೋಳಿ ಸಾಕಣೆ ಕೊಠಡಿಯ ಉಷ್ಣಾಂಶದ ಸ್ಥಿರತೆಯನ್ನು ವಿದ್ಯುತ್ ಬಲ್ಬ್ ಶಾಖದ ಸಹಾಯದಿಂದ ಕಾಪಾಡಿಕೊಳ್ಳುವಂತೆ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಸಿ. ರಾಮಚಂದ್ರ, ಸಹ ಸಂಶೋಧಕ ಡಾ.ಜಿ.ವಿ. ಸುಮಂತ್ ಕುಮಾರ್ ಸಲಹೆ ನೀಡಿದ್ದಾರೆ.