ಸಾರ್ವಜನಿಕರ ಗಮನಕ್ಕೆ. ಮುಂದಿನ 24 ಗಂಟೆ ರಾಜ್ಯದ ಈ ಭಾಗಗಳಲ್ಲಿ ಮಳೆ ಅಲರ್ಟ್

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚೆನ್ನೈ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Rain alert in these parts of the karnataka for the next 24 hours mrq

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆ ಆರ್ಭಟ ಕಡಿಮೆಯಾಗಿದ್ದು, ಹಂತ ಹಂತವಾಗಿ ಚಳಿ ತೀವ್ರತೆ ಹೆಚ್ಚಾಗುತ್ತಿದೆ. ಇನ್ನೇನು ಮಳೆ ಕಡಿಮೆ ಆಯ್ತು ಅಂತ ನಿಟ್ಟುಸಿರು ಬಿಡುವಷ್ಟರಲ್ಲಿ ರಾಜ್ಯಕ್ಕೆ ಮಳೆಯ ಸೂಚನೆ ಸಿಕ್ಕಿದೆ. ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ನಗರದ ಜನತೆಗೆ ಇಬ್ಬನಿ ಮುದ ನೀಡುತ್ತಿದೆ. ಚಳಿ ಜೊತೆ ಇಬ್ಬನಿ ಬೀಳುತ್ತಿರೋದರಿಂದ ತಂಪಾದ ಗಾಳಿ ಸಿಲಿಕಾನ್ ಸಿಟಿಯ ತಾಪಮಾನವನ್ನು ಇಳಿಕೆ ಮಾಡಿದೆ.

ನವೆಂಬರ್ ಕೊನೆ ಮತ್ತು ಡಿಸೆಂಬರ್ ಮೊದಲ ವಾರದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಉತ್ತಮ ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಪರಿಣಾಮ ಮಳೆ ಅಧಿಕವಾಗಿತ್ತು. ಹಾಗೆಯೇ ರಾಜ್ಯದ ಉತ್ತರ ಒಳನಾಡಿನ ಭಾಗದಲ್ಲಿಯೂ ಮಳೆಯಾಗಿತ್ತು. ಈ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ತರಕಾರಿ ಬೆಳೆ ಸಂಪೂರ್ಣ ನಾಶವಾಗಿತ್ತು. ಫೆಂಗಲ್ ಚಂಡಮಾರುತ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ತರಕಾರಿ ಬೆಲೆ ಏರಿಕೆಯಾಗಿತ್ತು.

ಇದನ್ನೂ ಓದಿ:  ದಿನಕ್ಕೆ ಇಷ್ಟು ಕಪ್ ಕಾಫಿ ಕುಡಿದ್ರೆ ಹೆಚ್ಚಾಗುತ್ತೆ 2 ವರ್ಷ ಆಯಸ್ಸು

ಮಳೆ ಅಲರ್ಟ್ 
ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಚೆನ್ನೈ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯ ಅಲರ್ಟ್ ನೀಡಲಾಗಿದೆ. ಹಾಗೆ ಆಂಧ್ರ ಪ್ರದೇಶದ ಕಡಲತೀರದಲ್ಲಿಯೂ ಮಳೆಯಾಗುವ ಸಾಧ್ಯತೆಗಳಿವೆ. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ  ಎಂದು ಹಮಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿ ನಗರ, ಯಶವಂತಪುರ, ಜಾಲಹಳ್ಳಿ, ಆರ್‌ಟಿ ನಗರ, ಹೆಬ್ಬಾಳ ಸೇರಿದಂತೆ ವಿಧಾನಸೌಧದ ಸುತ್ತಮುತ್ತ ಬೆಳಗ್ಗೆಯಿಂದಲೇ ಇಬ್ಬನಿ ಬೀಳುತ್ತಿದೆ. ಇಂದು ನಗರದಲ್ಲಿ ಶೇ.40ರಷ್ಟು ಮಳೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಹಿಮಪಾತ: ನಿಯಂತ್ರಣ ಕಳೆದುಕೊಂಡು 360 ಡಿಗ್ರಿ ತಿರುಗಿದ ಕಾರು: ಮನಾಲಿ ವೀಡಿಯೋ ವೈರಲ್

Latest Videos
Follow Us:
Download App:
  • android
  • ios