ವಾಯುಬಾರ ಕುಸಿತ, ಕರ್ನಾಟಕದಲ್ಲಿ ಮತ್ತೆ ಮಳೆ: ಎಚ್ಚರ...ಎಚ್ಚರ...!

ಈಗಾಗಲೇ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದೆ. ಇದೀಗ ವಾಯುಬಾರ ಕುಸಿತವಾಗಿದ್ದು ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ.

rain forecast again In Karnataka for Air cushion In Bengal rbj

ಬೆಂಗಳೂರು, (ಅ.20): ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಉಂಟಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ.

ಬಂಗಾಳ ಉಪ ಸಾಗರ ಮಧ್ಯೆ ಭಾಗದಲ್ಲಿ ವಾಯುಬಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಬಸವನಗೌಡ.ಎಸ್.ಪಾಟೀಲ್ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿ ಜನರೇ ಎಚ್ಚರ... ಅಬ್ಬರಿಸಲಿದ್ದಾನೆ ವರುಣ

ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 20 ರಿಂದ 23 ರ ವರೆಗೆ  ಬಹುತೇಕ ಎಲ್ಲ ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ನಂತರ ಅಕ್ಟೋಬರ್ 24 ರಂದು ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಉತ್ತರ ಕನ್ನಡ , ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ  ಭಾರಿ‌ಮಳೆಯಾಗುವ  ಸಾಧ್ಯತೆ ಇದ್ದು ಅಕ್ಟೋಬರ್ 20 ರಿಂದ 23 ರ ವರೆಗೆ ಎಲ್ಲೋ ಅರ್ಲಟ್ ನೀಡಲಾಗಿದೆ.

*ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 20 ರಿಂದ 22 ರವರೆಗೆ, ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 22/23 ರಂದು ಬಹುತೇಕ ಎಲ್ಲ ಕಡೆ ಮಳೆಯಾಗಲಿದೆ. ಇನ್ನು ಬೆಂಗಳೂರಿನಲ್ಲಿ‌ ಅಕ್ಟೊಬರ್ 20ಹಾಗೂ 21 ರಂದು‌ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದರಿಂದ ಸಾರ್ವಜನಿಕರ ಕೊಂಚ ಮುನ್ನೆಚ್ಚರಿಕೆಯಿಂದ ಇರುವುದು ಒಳಿತು. 

Latest Videos
Follow Us:
Download App:
  • android
  • ios