Asianet Suvarna News Asianet Suvarna News

ಕರ್ನಾಟಕದಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವಾಗ..?

rain forecast Two Days again in Karnataka From Nov 25 rbj
Author
Bengaluru, First Published Nov 21, 2020, 8:53 PM IST

ಬೆಂಗಳೂರು, (ನ.21): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇದೇ ನ.25ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಮಳೆ ಕೊಯ್ಲು ಅಳವಡಿಸಿಕೊಳ್ಳದವರಿಂದ ಕೋಟ್ಯಂತರ ರೂ. ವಸೂಲಿ..! 

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.25ರಂದು ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ನ.26ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವುದು ಒಳಿತು. 

Follow Us:
Download App:
  • android
  • ios