ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಂಡು ಬರುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು (ಮೇ.12): ರಾಜ್ಯದಲ್ಲಿ ಮತ್ತೆ ಪೂರ್ವ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಂಡು ಬರುತ್ತಿದ್ದು, ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಪೂರ್ವಮುಂಗಾರು ಉತ್ತಮವಾಗಿದ್ದು, ಈಗಾಗಲೇ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಮಳೆಯಾಗಿದೆ. ಮೇ 16ರ ವರೆಗೆ ಐದು ದಿನದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಪ್ರಮುಖವಾಗಿ ತುಮಕೂರು, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ, ಮೈಸೂರು ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರಾವಾಡ, ಗದಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ, ಭಾರೀ ಗಾಳಿಯೂ ಬೀಸಬಹುದಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕರಾವಳಿಯ ಮೂರು ಜಿಲ್ಲೆಗಳಲ್ಲೂ ಸಾಧಾರಾಣ ಮಳೆ ಇರಲಿದೆ. ಒಟ್ಟಾರೆ ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆಯಿಂದ ಬಿಸಿಲ ಪ್ರಮಾಣ ಕಡಿಮೆಯಾಗಲಿದ್ದು, ಗರಿಷ್ಠ ಉಷ್ಣಾಂಶ ಕೊಂಚ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತೆಂಗು ನಾಟಿ ಸಿದ್ಧತೆಗೆ ಸಕಾಲ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ತೆಂಗು ಒಂದಾಗಿದ್ದು ತೆಂಗು ಪ್ರದೇಶ ಮತ್ತು ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು ತೆಂಗು ನಂಬಿ ಇಲ್ಲಿನ ಸಾವಿರಾರು ರೈತರು ಜೀವನ ಕಟ್ಟಿಕೊಂಡಿದ್ದು ಈಗ ಮುಂಗಾರು ಮಳೆ ಆರಂಭವಾಗಿದ್ದು ನಾಟಿಗೆ ಸಕಾಲವಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಕೀರ್ತಿ ಶಂಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಪ್ರಸ್ತುತ ವರ್ಷ ಮುಂಗಾರು ಮಳೆ ಆರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ತೆಂಗಿನ ಸಸಿಗಳನ್ನು ನಾಟಿ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. 

ಮೇ.27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ: ವಾಡಿಕೆಗಿಂತ ಮೊದಲೇ ಮಳೆ ಆಗಮನದ ನಿರೀಕ್ಷೆ

ತೆಂಗನ್ನು ವಿವಿಧ ಮಣ್ಣುಗಳಲ್ಲಿ ಬೆಳೆಯಬಹುದಾಗಿದ್ದು ನೀರು ಬಸಿದು ಹೋಗುವ ಆಳವಾದ ಮರಳು ಮಿಶ್ರಿತ ಗೋಡು, ಜಂಬಿಟ್ಟಿಗೆ ಮತ್ತು ಕೆಂಪು ಗೋಡು ಮಣ್ಣುಗಳು ತೆಂಗನ್ನು ಬೆಳೆಯಲು ಯೋಗ್ಯವಾಗಿದೆ. ಜೇಡಿಮಣ್ಣು ಮತ್ತು ನೀರು ಬಸಿದು ಹೋಗದಿರುವ ಪ್ರದೇಶಗಳಲ್ಲಿ ತೆಂಗು ಹುಲುಸಾಗಿ ಬೆಳೆಯುವುದಿಲ್ಲ. ಮಣ್ಣಿನಲ್ಲಿ ೧.೫೦ ಮೀ. ಆಳದವರೆಗೆ ಯಾವುದೇ ತರಹದ ಹಾಸಿದ ಬಂಡೆಗಳಾಗಲಿ, ಗಟ್ಟಿತನದ ಮಣ್ಣಾಗಲಿ ಇರಬಾರದು. ತೆಂಗು ಉಷ್ಣವಲಯದ ಬೆಳೆಯಾಗಿದ್ದು, ಹೆಚ್ಚು ಪ್ರಕಾಶಮಾನವಾದ ಬೆಳಕನ್ನು ಬಯಸುತ್ತದೆ ಮತ್ತು ಉಷ್ಣಾಂಶ ೧೫ ರಿಂದ ೨೭ಸೆ. ಇರುವ ಪ್ರದೇಶಗಳಲ್ಲಿ ಉತ್ತಮವಾಗಿ ಬೆಳೆಯುತ್ತದೆ.