* ಆ. 11ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ* ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ* ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆ
ಬೆಂಗಳೂರು(ಆ.08): ಸೋಮವಾರ ಬೆಳಗ್ಗೆಯವರೆಗೆ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈಋುತ್ಯ ಮುಂಗಾರು ಸಾಮಾನ್ಯವಾಗಿದ್ದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಸುಬ್ರಹ್ಮಣ್ಯ, ಆಗುಂಬೆಯಲ್ಲಿ ತಲಾ 10 ಸೆಂ.ಮೀ., ಮಡಿಕೇರಿ, ಭಾಗಮಂಡಲ ತಲಾ 9 ಸೆಂ.ಮೀ., ಧರ್ಮಸ್ಥಳ, ಸಂತೇಹಳ್ಳಿ ತಲಾ 8 ಸೆಂ.ಮೀ., ಬೆಳ್ತಂಗಡಿ ಮತ್ತು ತುಮರಿ ತಲಾ 7 ಸೆಂ.ಮೀ ಮಳೆಯಾಗಿದೆ.
ಅಥಣಿ: ಪ್ರವಾಹ ಆಯ್ತು ಈಗ ಸಾಂಕ್ರಾಮಿಕ ರೋಗ ಭೀತಿ
ಮೀನುಗಾರರಿಗೆ ಎಚ್ಚರಿಕೆ:
ಕರಾವಳಿಯ ತೀರ ಪ್ರದೇಶದಲ್ಲಿ ಪ್ರತಿ ಘಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆಗಸ್ಟ್ 11ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ತುಂತುರು ಮಳೆ:
ಭಾನುವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು 28 ಡಿಗ್ರಿ ಗರಿಷ್ಠ ತಾಪಮಾನ ಮತ್ತು 20 ಡಿಗ್ರಿ ಕನಿಷ್ಠ ತಾಪಮಾನ ಇರಲಿದೆ.
