ರಾಜ್ಯದ ಈ ಜಿಲ್ಲೆಗಳಲ್ಲಿ ಇಂದೂ ಮಳೆ ಸಾಧ್ಯತೆ
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಅ.12 ವರೆಗೆ ಕೊಡಗು, ಹಾಸನ , ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು(ಅ.10): ಮುಂದಿನ ಎರಡು- ಮೂರು ದಿನ ರಾಜ್ಯದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದ್ದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಅ.12 ವರೆಗೆ ಕೊಡಗು, ಹಾಸನ , ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.
ಬೆಳ್ಳಂ ಬೆಳ್ಳಿಗ್ಗೆ ಬೆಂಗಳೂರಿನಲ್ಲಿ ಮಳೆರಾಯ ಆಗಮನ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಉಳಿದಂತೆ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ದಾವಣಗೆರೆ, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆ ಹೊರತು ಪಡಿಸಿ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.