ಅರಬ್ಬಿ ಮತ್ತು ಬಂಗಾಳಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಪ್ರಭಾವ ಹೆಚ್ಚಾಗಿದೆ. ಮುಂದಿನ ನಾಲ್ಕುದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. 

Add Asianetnews Kannada as a Preferred SourcegooglePreferred

ಅರಬ್ಬಿ ಮತ್ತು ಬಂಗಾಳಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಪ್ರಭಾವ ಹೆಚ್ಚಾಗಿದೆ. ಮುಂದಿನ ನಾಲ್ಕುದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ. 

ಹಿಂಗಾರು ಬಿತ್ತನೆ ಈ ಮಳೆ ಅನುಕೂಲವಾಗಲಿದೆ ಎಂದು ಕೆಎಸ್‌ಎನ್ ಡಿಎಂಸಿ ವಿಜ್ಞಾನಿ ಪ್ರಭು ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ. ಹಿಂಗಾರು ಮಳೆ ವಿಳಂಬಕ್ಕೆ ಕಳೆದ ವಾರ ಉಂಟಾದ ವಾಯುಭಾರ ಕುಸಿತ ಒಂದು ಪ್ರಮುಖ ಕಾರಣವಾಗಿದೆ. ಇನ್ನು ಭಾರತೀಯ ಹವಾಮಾನ ಇಲಾಖೆ ಹಿಂಗಾರು ಮಳೆಯನ್ನು ಘೋಷಣೆ ಮಾಡಿಲ್ಲ ಎಂದು ಪ್ರಭು ತಿಳಿಸಿದರು.