Asianet Suvarna News Asianet Suvarna News

ಡೀಸೆಲ್‌ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ರೈತರು ಬಳಸುವ ಕೃಷಿ ಯಂತ್ರೋಪಕರಣಗಳಿಗೆ ಇಂಧನ ವೆಚ್ಚದ ನೆರವು ನೀಡುವ ರೈತಶಕ್ತಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಇಲ್ಲಿಯ ಕೃಷಿ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು. 

Raitha Shakti Yojana Launch Special assistance will be provided to grow agricultural economy says Basavaraj Bommai gvd
Author
First Published Feb 1, 2023, 9:14 AM IST

ಧಾರವಾಡ (ಫೆ.01): ರೈತರು ಬಳಸುವ ಕೃಷಿ ಯಂತ್ರೋಪಕರಣಗಳಿಗೆ ಇಂಧನ ವೆಚ್ಚದ ನೆರವು ನೀಡುವ ರೈತಶಕ್ತಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಇಲ್ಲಿಯ ಕೃಷಿ ವಿಶ್ವವಿದ್ಯಾಲಯದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಅದರಂತೆ ಸದ್ಯ ರಾಜ್ಯದ 51.80 ಲಕ್ಷ ರೈತರ ಖಾತೆಗೆ 383.15 ಕೋಟಿ ನೇರವಾಗಿ ಜಮೆಯಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು. ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ನೂತನ ಯೋಜನೆಗಳಿಗೆ ಚಾಲನೆ ಹಾಗೂ ಕೃಷಿ ಪಂಡಿತ್‌, ಕೃಷಿ ಪ್ರಶಸ್ತಿ ಪ್ರದಾನ ಮತ್ತು ರೈತ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಸ್ವಾಂತ್ರಂತ್ರ್ಯಾ ನಂತರ ಕೃಷಿ ಬೆಳೆದಿದೆ. ಹಸಿರು ಕ್ರಾಂತಿಯಾಗಿದೆ. ಇಷ್ಟಾಗಿಯೂ ರೈತರು ಮಾತ್ರ ಆರ್ಥಿಕವಾಗಿ ಸದೃಢರಾಗುತ್ತಿಲ್ಲ. ಅವರನ್ನು ಆರ್ಥಿಕ ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತಿದೆ. ರಾಜ್ಯದ ಎಲ್ಲ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯ ಪ್ರೋತ್ಸಾಹದ ದೃಷ್ಟಿಯಿಂದ ಇಂಧನ ವೆಚ್ಚ(ಡೀಸೆಲ್‌ ವೆಚ್ಚ)ದ ಭಾರವನ್ನೂ ರಾಜ್ಯ ಸರ್ಕಾರ ಕಡಿತಗೊಳಿಸಲು ರೈತ ಶಕ್ತಿ ಯೋಜನೆ ಜಾರಿಗೆ ತಂದಿದ್ದು, ಪ್ರತಿ ಎಕರೆಗೆ .250ರಂತೆ ಗರಿಷ್ಠ ಐದು ಎಕೆರೆಗೆ .1250 ನೀಡುತ್ತಿದೆ. ಇದಕ್ಕಾಗಿ .500 ಕೋಟಿ ಅನುದಾನ ತೆಗೆದಿರಿಸಿದೆ ಎಂದರು.

ಬಡವರು ಸೈಟ್‌ ಖರೀದಿಗೆ ಸರಳ ಕಾನೂನು: ಸಿಎಂ ಬೊಮ್ಮಾಯಿ ಭರವಸೆ

ಅಲ್ಲದೆ, ಭೂರಹಿತ ಕೃಷಿ ಕಾರ್ಮಿಕ ಹಾಗೂ ರೈತರ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದು, 11 ಲಕ್ಷ ಮಕ್ಕಳಿಗೆ . 488 ಕೋಟಿ ಅನುದಾನ ಒದಗಿಸಿದೆ ಎಂದು ಅಂಕಿ ಸಮೇತ ಬಿಜೆಪಿ ಸರ್ಕಾರದ ಸಾಧನೆ ಹೇಳಿಕೊಂಡರು. ಪ್ರತಿ ಗ್ರಾಮದಲ್ಲಿ ಎರಡು ಯುವಕ ಸಂಘಗಳಿದ್ದು ಅವುಗಳಿಗೆ 1 ಲಕ್ಷ ಸರ್ಕಾರದ ಅನುದಾನ, 4 ಲಕ್ಷ ಬ್ಯಾಂಕ್‌ ಸಾಲ ನೀಡುವ ಮೂಲಕ ಗ್ರಾಮದಲ್ಲೇ ಮಾರುಕಟ್ಟೆಸೇರಿದಂತೆ ಆರ್ಥಿಕ ಪುನಶ್ಚೇತನ ಮಾಡಲಾಗುವುದು. ಇದರೊಂದಿಗೆ ಪ್ರತಿ ಗ್ರಾಮದಲ್ಲಿ ಮಹಿಳಾ ಮಂಡಳಗಳಿಗೂ ಆರ್ಥಿಕ ಬಲ ನೀಡಲಾಗುತ್ತಿದೆ ಎಂದು ಹೇಳಿದರು.

ರೈತ ಸಂಜೀವಿನಿಗೆ ಚಾಲನೆ: ಇದೇ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಉತ್ಪಾದನೆಗೆ ಪ್ರಮುಖ ಎನಿಸಿರುವ ಮಣ್ಣು ಮತ್ತು ನೀರಿನ ಪರೀಕ್ಷೆ, ಕೀಟ ಮತ್ತು ರೋಗಗಳನ್ನು ಪತ್ತೆ ಹಚ್ಚುವಿಕೆ ಹಾಗೂ ನಿಯಂತ್ರಣಾ ಕ್ರಮಗಳ ಕುರಿತು ಮಾಹಿತಿಯನ್ನು ರೈತರ ಕ್ಷೇತ್ರ ಭೇಟಿ ಮೂಲಕ ನೀಡಲು .11.52 ಕೋಟಿ ಅನುದಾನದಲ್ಲಿ 64 ಸಂಚಾರಿ ಸಸ್ಯ ಆರೋಗ್ಯದ ಕೃಷಿ ಸಂಜೀವಿನಿ ವಾಹನಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಿದರು. ಕೃಷಿ ಸಚಿವ ಬಿ.ಸಿ. ಪಾಟೀಲ್‌, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಸರ್ಕಾರದ ಕಾರ್ಯದರ್ಶಿ ಶಿವಯೋಗಿ ಕಳಸದ ಮತ್ತಿತರರು ಇದ್ದರು.

ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಂಪನಿ ಅಧ್ಯಕ್ಷ: ಲಖನ್‌ ಜಾರಕಿಹೊಳಿ

ಈ ಬಾರಿ ರೈತಪರ ಬಜೆಟ್‌ ಮಂಡನೆ: ಫೆ.17ರಂದು ಮಂಡಿಸಲಿರುವ ರಾಜ್ಯ ಬಜೆಟ್‌ ವಿಶೇಷವಾಗಿ ರೈತಪರವಾಗಿರಲಿದೆ. ಕೃಷಿ ಸಾಲದ ನೀತಿ ಬದಲಾವಣೆ ಸೇರಿ ಹತ್ತು ಹಲವು ಯೋಜನೆಗಳನ್ನು ರೈತರಿಗೆ ನೀಡುವ ಚಿಂತನೆ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈತರಿಗೆ ಶುಭ ಸುದ್ದಿ ನೀಡಿದ್ದಾರೆ. ರೈತರು ಬೆಳೆದ ಬೆಳೆಗೆ ಬೆಲೆಯ ಅನಿಶ್ಚಿತತೆ ಹೋಗಲಾಡಿಸಿ ನಿಶ್ಚಿತತೆ ತರುವುದು ತಮ್ಮ ಗುರಿ. ಯಾವುದೇ ಒಂದು ಬೆಳೆಯ ಆದಾಯದ ನಿರೀಕ್ಷೆ ಹಾಗೂ ಲೆಕ್ಕಾಚಾರ ಹಾಕದೇ ರೈತರು ಬೆಳೆ ಬಿತ್ತಿ ಬೀಜ, ಗೊಬ್ಬರ, ಯಂತ್ರೋಪಕರಣ ಹಾಗೂ ಔಷಧ ಅಂಥವುಗಳಿಗೆ ಅತ್ಯಧಿಕ ವೆಚ್ಚ ಮಾಡುತ್ತಿದ್ದಾರೆ. ಬೆಳೆಯ ಖರ್ಚು-ವೆಚ್ಚ ತೆಗೆದು ಉಳಿತಾಯ ಆಗುವ ರೀತಿಯಲ್ಲಿ ನಿಶ್ಚಿತ ಬೆಲೆ ಬರುವಂತೆ ಯೋಜನೆ ರೂಪಿಸಲಾಗುತ್ತಿದೆ. ಇದರೊಂದಿಗೆ ಪ್ರಸಕ್ತ ವರ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ .33 ಲಕ್ಷ ಕೋಟಿ ನೀಡಲಾಗಿದ್ದು, ರೈತರಿಗೆ ನೀಡುತ್ತಿರುವ ಈ ಸಾಲದ ನೀತಿಯಲ್ಲೂ ಬದಲಾವಣೆ ಮಾಡುವ ನಿಟ್ಟಿನಲ್ಲಿ ತಾವು ಚಿಂತನೆ ನಡೆಸಿದ್ದಾಗಿ ತಿಳಿಸಿದರು.

Follow Us:
Download App:
  • android
  • ios