ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಬಿಬಿಎಂಪಿ ಆಯುಕ್ತ ಗಿರಿನಾಥ್ ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಬೆಂಗಳೂರು (ಡಿ.18): ಒಂದೆಡೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ನಡೆಸುತ್ತಿದ್ದರೆ ಮತ್ತೊಂದೆಡೆ ರಾಜಕಾಲುವೆಗೆ ಮಣ್ಣು ಸುರಿಯುವ ಮೂಲಕ ಒತ್ತುವರಿ ಮಾಡಲಾಗುತ್ತಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉತ್ತರಹಳ್ಳಿಯ ‘ದಿ ಹ್ಯಾಪಿ ವ್ಯಾಲಿ’ ಬಡಾವಣೆಯಲ್ಲಿ ರಾಜಕಾಲುವೆಗೆ ಮಣ್ಣು ಸುರಿದು ಜಾಗ ಕಬ್ಜ ಮಾಡುವ ಹುನ್ನಾರ ಮಾಹಿತಿ ತಿಳಿದ ತಕ್ಷಣ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ರಾಜಕಾಲುವೆಗೆ ಮಣ್ಣು ತುಂಬಿಸುವ ಕೆಲಸವನ್ನು ನಿಲ್ಲಿಸಿದ್ದಾರೆ.
ಎಷ್ಟೋ ಕಡೆ ರಾಜಕಾಲುವೆಯಿಂದ ಹೂಳನ್ನು ವಿಲೇವಾರಿ ಮಾಡದ ಕಾರಣ ಮಳೆಗಾಲದಲ್ಲಿ ರಾಜಕಾಲುವೆ ಉಕ್ಕಿ ಹರಿದು ಜನನಿಬಿಡ ಪ್ರದೇಶಗಳಲ್ಲಿ ಹರಿದು ಅವಾಂತರ ಸೃಷ್ಠಿಯಾಗುತ್ತದೆ. ಆದರೆ ಕೆಲವೆಡೆ ಇಂದಿಗೂ ತ್ಯಾಜ್ಯ, ಹಳೆ ಕಟ್ಟಡದ ಮಣ್ಣು, ಕಸ, ಪ್ರಾಣಿಗಳ ತ್ಯಾಜ್ಯಗಳನ್ನು ರಾಜಕಾಲುವೆಗೆ ಸುರಿಯಲಾಗುತ್ತಿದೆ. ಜನವಸತಿ ಪ್ರದೇಶಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ ಅಡಿಯೊಂದಕ್ಕೆ ನಗರ, ಗ್ರಾಮಾಂತರ ಪ್ರದೇಶ ಹಾಗೂ ಪ್ರದೇಶದ ಅನುಗುಣವಾಗಿ ನಿವೇಶನದ ದರ ನಿಗದಿ ಹೆಚ್ಚಾಗುತ್ತಿದ್ದು, ರಿಯಲ್ ಎಸ್ಟೇಟ್ ಉದ್ಯಮ ಗೋಮಾಳ, ರಾಜಕಾಲುವೆಯ ಬಫರ್ ಜೋನ್ ಎಂದು ನೋಡದೆ ಜಾಗ ಕಬಳಿಸಲು ಮುಂದಾಗಿದೆ. ನಿವೇಶನ ಕೊಂಡು ಮನೆ ನಿರ್ಮಿಸಿಕೊಂಡವರಿಗೆ ರಾಜಕಾಲುವೆಯ ಮೇಲೆ ನಾವಿದ್ದೇವೆ ಎಂಬ ಸಂಗತಿ ತಿಳಿದಿರುವುದಿಲ್ಲ, ಒತ್ತುವರಿಯಾಗಿರುವ ಅಂಶ ಬೆಳಕಿಗೆ ಬರುವ ಹೊತ್ತಿಗೆ ಕಾಲ ಮೀರಿರುತ್ತದೆ. ಮತ್ತೊಂದೆಡೆ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಲು ಬಿಬಿಎಂಪಿ ಅಧಿಕಾರಿಗಳು ನಕ್ಷೆ ಮಂಜೂರಾತಿ , ಖಾತೆ, ಕಂದಾಯ ವಗೈರೆಗಳಿಗೆ ಅನುಮತಿ ನೀಡಿ ಸಾಥ್ ನೀಡಿರುತ್ತಾರೆ.
ದಾಖಲಾತಿಗಳ ಅನುಸಾರ ಸ್ವಂತ ಸೂರು ಹೊಂದಬೇಕೆಂಬ ಕನಸು ಹೊತ್ತವರು ಬ್ಯಾಂಕ್ ಲೋನ್ ಮೂಲಕ ಮನೆ ನಿರ್ಮಿಸಿಕೊಂಡು ಜೀವನ ನಡೆಸುತ್ತಿರುವ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳೇ ರಾಜಕಾಲುವೆ ಬಫರ್ ಜೋನ್ ನಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ತೆರವುಗೊಳಿಸುತ್ತಾರೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ಹೊಸ ಪಾರ್ಕಿಂಗ್ ವ್ಯವಸ್ಥೆ ಸದ್ಯಕ್ಕಿಲ್ಲ, ಬಿಬಿಎಂಪಿ ಸ್ಪಷ್ಟನೆ
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಚುರುಕು:
ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಬಿಬಿಎಂಪಿ ಆಯುಕ್ತ ಗಿರಿನಾಥ್ ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಸರ್ವೆ ಕಾರ್ಯವೇ ವಿಳಂಬ ಮಾಡುತ್ತಿರುವುದೇ ಒತ್ತುವರಿ ತೆರವಿಗೆ ಅಡ್ಡಿಯಾಗಿದೆ. ರಾಜಕಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆ. ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ ಇಲಾಖೆ. ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ರವರಿಂದ ಆದೇಶ ನೀಡುವಂತೆ ಸೂಚನೆ ನೀಡಲಾಗಿದೆ.
ರಾಜ್ಯಧಾನಿಯಲ್ಲಿ ಹೊಸ ಒತ್ತುವರಿಗಳು ಸೇರಿದಂತೆ 3176 ಒತ್ತುವರಿಗಳನ್ನು ಗುರುತಿಸಿರುವ ಪಾಲಿಕೆ. ಒಟ್ಟು 2322 ಒತ್ತುವರಿಗಳನ್ನು ಇದುವರೆಗೆ ತೆರವುಗೊಳಿಸಲಾಗಿದೆ. 854 ಒತ್ತುವರಿಗಳನ್ನು ತೆರವು ಬಾಕಿ ಇವೆ. ಈ ಪೈಕಿ 155 ಒತ್ತುವರಿ ಪ್ರಕರಣಗಳು ಕೋರ್ಟ್ ನಲ್ಲಿವೆ. 487 ಒತ್ತುವರಿಗಳಿಗೆ ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 162 ಒತ್ತುವರಿಗಳಿಗೆ ತಹಶಿಲ್ದಾರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ಬಗ್ಗೆ ಮಾಹಿತಿ ನೀಡಿದರು.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿತ್ಯ 85 ಜನರಿಗೆ ಕಚ್ಚುತ್ತಿವೆ ನಾಯಿಗಳು: ಬಿಬಿಎಂಪಿ ಅಂಕಿ ಅಂಶದಲ್ಲಿ ಏನಿದೆ?
ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ. ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಗಿದೆ. ಆದೇಶಗಳನ್ನು ನೀಡಿದ ಬಳಿಕ ಪಾಲಿಕೆ ಹಾಗೂ ಕಂದಾಯ ಇಲಾಖೆಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತದೆ. ಕಳೆದ 15 ದಿನಗಳಲ್ಲಿ ಮಹದೇವಪುರ ವ್ಯಾಪ್ತಿಯಲ್ಲಿ ಬರುವ ನಿರಂತರವಾಗಿ ಸಾಗುತ್ತಿದೆ ಒತ್ತುವರಿ ತೆರವು ಕಾರ್ಯಾರಣೆ. ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್ ಪುರದ ಸರ್ವೇ ಸಂಖ್ಯೆ 69ರಲ್ಲಿ ಬರುವ 3 ಅಂತಸ್ತಿನ ಕಟ್ಟಡದಲ್ಲಿ ಬರುವ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.
ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ತೆರವು ಬಗ್ಗೆ ಆಯುಕ್ತರು ಮಾಹಿತಿ ನೀಡಿದರು.
