ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮೊಟ್ಟ ಮೊದಲ ಪತ್ರಿಕಾ ವಿತರಕ ಮೈಸೂರು ಜವರಪ್ಪ
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.
ಬೆಂಗಳೂರು (ಅ.31): ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಪತ್ರಿಕಾ ವಿತರಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡೀ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿ ಗೌರವಿಸಿದೆ. ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, 'ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು' ಎನ್ನುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸರ್ಕಾರಿ ಶಾಲೆಗೆ ಭೂಮಿ ಕೊಟ್ಟ ಹುಚ್ಚಮ್ಮ ಸೇರಿ 68 ಮಂದಿ ಆಯ್ಕೆ
ವಸ್ತುನಿಷ್ಠ ವರದಿಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸಲಹೆ: ಮಂಡ್ಯದ ಖಾಸಗಿ ಸಮುದಾಯದ ಭವನದಲ್ಲಿ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂತರ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಧ್ಯಮಗಳಿಗೆ ಜವಾಬ್ದಾರಿಯುತ ಸ್ಥಾನ ಇದೆ. ತಂತ್ರಜ್ಞಾನ ಬೆಳೆದಂತೆ ಮಾಧ್ಯಮಗಳೂ ಬೆಳೆಯುತ್ತಿವೆ. ವಸ್ತುನಿಷ್ಟ ವರದಿಗೆ ಆದ್ಯತೆ ನೀಡಬೇಕು. ಮೂಢ ನಂಬಿಕೆ ಬಿಂಬಿಸುವ ಕೆಲಸ ಬಿಟ್ಟು, ಮೂಢ ನಂಬಿಕೆ ಹೋಗಲಾಡಿಸಲು ಕೆಲಸ ಮಾಡಿ ಎಂದು ಸಲಹೆ ನೀಡಿದರು.
ಯಾವುದೇ ಘಟನೆಯ ವಸ್ತುಸ್ಥಿತಿಯನ್ನು ಜನರಿಗೆ ತಿಳಿಸುವ ಕೆಲಸವನ್ನ ಪ್ರಮಾಣಿಕವಾಗಿ ಮಾಡಿ. ತನಿಖಾ ಪತ್ರಿಕೋದ್ಯಮ ಮಾಯವಾಗ್ತಿದೆ. ಊಹೆಯನ್ನೆಲ್ಲಾ ಸುದ್ದಿ ಮಾಡಬಾರದು. ಸಿಎಂ, ಮಂತ್ರಿಗಳ ಬದಲಾವಣೆ ಯಾರ್ಯಾರೋ ಮಾಡಲ್ಲ. ಶಾಸಕರು, ಹೈಕಮಾಂಡ್ ಕುಳಿತು ಮಾಡೋದು. ವಿಶ್ಲೇಷಣೆ, ಟೀಕೆ ಆರೋಗ್ಯಕರವಾಗಿರಲಿ. ಜನರಿಗೆ ಜ್ಞಾನ ವೃದ್ಧಿಯಾಗುವಂತಹ ಸುದ್ದಿ ಭಿತ್ತರಿಸಿ ಎಂದು ಮಂಡ್ಯ ಪತ್ರಕರ್ತರ ಸಂಘದ ಅಂತರ ಜಿಲ್ಲಾ ಸಮ್ಮೇಳನದಲ್ಲಿ ಮಾಹಿತಿ ನೀಡಿದರು.
ಬರಗಾಲದಿಂದ 33,770 ಕೋಟಿ ರೂ. ನಷ್ಟವಾಗಿದ್ರೂ, ಪರಿಹಾರ ಕೇಳದೇ 25 ಸಂಸದರು ಕಳ್ಳೆಕಾಯಿ ತಿನ್ನುತ್ತಿದ್ದಾರಾ? ಸಿಎಂ ಟೀಕೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಂತರ ಜಿಲ್ಲಾ ಸಮ್ಮೇಳನದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಠ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ವಹಿಸಿಕೊಂಡಿದ್ದರು. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಅಂತರ ಜಿಲ್ಲಾ ಸಮ್ಮೇಳನವಾಗಿದೆ. ಈ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್, ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿ ಹಲವರು ಭಾಗಿಯಾಗಿದ್ದರು.