ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಮರಾಜ್ಯದ ಕನಸು ನನಸಾಗಿದೆ: ಡಿಕೆ ಶಿವಕುಮಾರ
ರಾಮರಾಜ್ಯದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. ಶತಮಾನಗಳ ಕನಸು ಇಂದು ನನಸಾಗುತ್ತಿದ್ದು, ಅಯೋಧ್ಯೆ ತುಂಬಾ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ.
ಬೆಂಗಳೂರು (ಜ.23): ರಾಮರಾಜ್ಯದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಶತಮಾನಗಳ ಕನಸು ಇಂದು ನನಸಾಗುತ್ತಿದ್ದು, ಅಯೋಧ್ಯೆ ತುಂಬಾ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅಯೋಧ್ಯೆಯ ಎಲ್ಲ ಬೀದಿ-ಬೀದಿಗಳು ತಳಿರು ತೋರಣಗಳಿಂದ ಅಲಂಕೃತಗೊಂಡಿದ್ದು, ಅಯೋಧ್ಯೆ ಮಧುವಣಗಿತ್ತಿಯಂತೆ ಸಿದ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ.
ನುಡಿದಂತೆ ನಡೆಯದ ಪ್ರಧಾನಿ ಮೋದಿ ಯಾವ ಸೀಮೆ ರಾಮಭಕ್ತ? ಟ್ವೀಟ್ ಮೂಲಕ ಸಿಎಂ ವಾಗ್ದಾಳಿ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಬರೆದುಕೊಂಡಿದ್ದಾರೆ.