ಜಾರಕಿಹೊಳಿ ಸೀಡಿ ಕೇಸ್‌ ಕ್ಲೋಸ್‌ ಆಗಲ್ಲ

  • ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸೀಡಿ ಬಹಿರಂಗ ಪ್ರಕರಣ
  • ಎಸ್‌ಐಟಿ ರಚಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ
  • ವಿಚಾರಣೆಯನ್ನು ಹೈಕೋರ್ಟ್‌ ಜು.16ಕ್ಕೆ ಮುಂದೂಡಿದೆ.
Ramesh Jarkiholi CD Case adjourned  on July  16 snr

ಬೆಂಗಳೂರು (ಜು.15):  ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸೀಡಿ ಬಹಿರಂಗ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜು.16ಕ್ಕೆ ಮುಂದೂಡಿದೆ.

ಸಿಡಿ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ವಕೀಲರಾದ ಗೀತಾ ಮಿಶ್ರಾ ಹಾಗೂ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ವಕೀಲ ಉಮೇಶ್‌ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇದೇ ಅರ್ಜಿಯಲ್ಲಿ ತನ್ನ ವಾದವನ್ನೂ ಆಲಿಸುವಂತೆ ಪ್ರಕರಣದ ಸಂತ್ರಸ್ತೆ ಎನ್ನಲಾದ ಯುವತಿ ಸಹ ಮಧ್ಯಂತರ ಅರ್ಜಿ ಸಲ್ಲಿಸಿದ್ದಾಳೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ಸುದ್ದಿಗೆ ಸ್ಪಷ್ಟನೆ ಕೊಟ್ಟ ರಮೇಶ್ ಜಾರಕಿಹೊಳಿ

ಈ ಎಲ್ಲ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅಚಾರಣೆಗೆ ಬುಧವಾರ ಬಂದಿದ್ದವು. ಸಮಯದ ಅಭಾವದ ಹಿನ್ನೆಲೆಯಲ್ಲಿ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಜು.16ಕ್ಕೆ ಮುಂದೂಡಿತು.

ಈ ವೇಳೆ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್‌, ರಮೇಶ್‌ ಜಾರಕಿಹೊಳಿ ವಿರುದ್ಧ ಸಂತ್ರಸ್ತೆ ನೀಡಿರುವ ದೂರನ್ನು ಮುಕ್ತಾಯಗೊಳಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಮೇಶ್ ಜಾರಕಿಹೊಳಿ ಷಡ್ಯಂತ್ರಕ್ಕೆ ಬಲಿಯಾಗಿದ್ದಾರೆ: ಸಾಹುಕಾರ್ ಪರ ಸೈನಿಕ ಬ್ಯಾಟಿಂಗ್ ...

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ದೂರನ್ನು ಮುಕ್ತಾಯಗೊಳಿಸುವುದಿಲ್ಲ ಎಂದು ಈಗಾಗಲೇ ಅಡ್ವೊಕೇಟ್‌ ಜನರಲ್‌ ಭರವಸೆ ನೀಡಿದ್ದಾರೆ. ಹಾಗಾಗಿ, ಜು.16ರ ಒಳಗೆ ದೂರು ಮುಕ್ತಾಯಗೊಳ್ಳುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ವಿಚಾರಣೆ ಮುಂದೂಡಿತು. 

Latest Videos
Follow Us:
Download App:
  • android
  • ios