ಜಾರಕಿಹೊಳಿ ಸಿಡಿ ಕೇಸ್‌ ಮಾಜಿ ಸಚಿವರಿಗೆ ಕೊಂಚ ರಿಲೀಫ್

 

  •  ಜಾರಕಿಹೊಳಿ ಸಿಡಿ ಕೇಸ್‌  ಮಾಜಿ ಸಚಿವರಿಗೆ ಕೊಂಚ ರಿಲೀಫ್
  •  ತನಿಖೆ ನಡೆಸಿ ಸಿದ್ಧಪಡಿಸಿರುವ ವರದಿ ಸಲ್ಲಿಕೆಗೆ ಹೈಕೋರ್ಟ್‌ನಿಂದ ಬ್ರೇಕ್‌
  • - ಎಸ್‌ಐಟಿ ಮುಖ್ಯಸ್ಥರು ವರದಿ ಪರಿಶೀಲಿಸಿ ಸಲ್ಲಿಸಲಿ
Ramesh Jarkiholi CV Case will be next heard on November 29 snr

ಬೆಂಗಳೂರು (ನ.10):  ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh Jarkiholi) ಸಿ.ಡಿ. ಪ್ರಕರಣದ (CD Case) ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ SIT) ತನಿಖೆ ನಡೆಸಿ ಸಿದ್ಧಪಡಿಸಿರುವ ವರದಿಯನ್ನು ತಂಡದ ಮುಖ್ಯಸ್ಥರು ಪರಿಶೀಲಿಸಿ ಸಲ್ಲಿಸುವವರೆಗೂ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸದಂತೆ ಹೈಕೋರ್ಟ್‌ (Karnataka high court) ಸೂಚಿಸಿದೆ.

ರಮೇಶ್‌ ಜಾರಕಿಹೊಳಿ ಪ್ರಕರಣವನ್ನು ಎಸ್‌ಐಟಿ (SIT) ತನಿಖೆಗೆ ವಹಿಸಿರುವ ಕ್ರಮ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿ ಸಿದ್ಧಪಡಿಸಿರುವ ತನಿಖಾ ವರದಿಯನ್ನು (Report) ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಪರಿಶೀಲಿಸಬೇಕು. ವರದಿಯ ಕುರಿತು ತಮ್ಮ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ನ.29ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಸಂತ್ರಸ್ತ ಯುವತಿಯ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್‌ (supreme Court) ವಕೀಲರಾದ ಇಂದಿರಾ ಜೈಸಿಂಗ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಠಾಣೆಯ ಪೊಲೀಸರು (Police) ತನಿಖೆ ನಡೆಸಿಲ್ಲ. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿರುವುದು ಕಾನೂನುಬಾಹಿರ. ಜೊತೆಗೆ, ಎಸ್‌ಐಟಿ (SUT) ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ನಡೆಸಲಾಗಿದೆ. ಆದ್ದರಿಂದ ಎಸ್‌ಐಟಿ ಮುಖ್ಯಸ್ಥರ ಸಹಿ ಇಲ್ಲದೆ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಗೆ ಮೌಲ್ಯವಿಲ್ಲ. ಆದ್ದರಿಂದ ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿದಾಖಲಿಸಲು ಅನುಮತಿ ನೀಡಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಎಸ್‌ಐಟಿ ಪರ ಹಿರಿಯ ವಕೀಲ ಆಶೋಕ್‌ ಹಾರನಹಳ್ಳಿ (ashok haranahalli), ಪ್ರಕರಣದ ತನಿಖೆಗಾಗಿ ಕವಿತಾ ಎಂಬ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ನಿಯಮಬದ್ಧವಾಗಿ ತನಿಖೆಯನ್ನು ಪೂರ್ಣಗೊಳಿಸಲಾಗಿದೆ. ಅಲ್ಲದೆ, ಆರೋಪ ಪಟ್ಟಿಯಲ್ಲಿ ಲೋಪಗಳಿದ್ದಲ್ಲಿ ಮ್ಯಾಜಿಸ್ಪ್ರೇಟ್‌ ನ್ಯಾಯಾಧೀಶರು ಪರಿಶೀಲಿಸಲು ಅವಕಾಶವಿದೆ. ಆದ್ದರಿಂದ ಆರೋಪ ಪಟ್ಟಿಸಲ್ಲಿಕೆಗೆ ಅವಕಾಶ ನೀಡಬೇಕು ಎಂದು ವಾದಿಸಿದರು.

ವಾದವನ್ನು ಆಲಿಸಿದ ನ್ಯಾಯಪೀಠ, ಎಸ್‌ಐಟಿ ಮುಖ್ಯಸ್ಥರು ತನಿಖಾ ವರದಿಯನ್ನು ಪರಿಶೀಲಿಸಿ ವರದಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಸಲ್ಲಿಸುವವರೆಗೂ ಆರೋಪ ಪಟ್ಟಿಸಲ್ಲಿಸದಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಜುಲೈನಲ್ಲೇ ರಮೇಶ್ ಜಾರಕಿಹೊಳಿ ಎಸ್‌ಐಟಿ ತನಿಖೆ ಅಂತ್ಯ

 

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣಕ್ಕೆ (CD Case) ಸಂಬಂಧಿಸಿದ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ಮುಕ್ತಾಯಗೊಂಡಿದ್ದು, ಅಂತಿಮ ವರದಿ ಸಿದ್ಧವಾಗಿತ್ತು.  ಈ ವರದಿಯನ್ನು ರಾಜ್ಯ ಸರ್ಕಾರ (karnataka govt) ಹೈಕೋರ್ಟ್‌ಗೆ ಮಾಹಿತಿ ನೀಡಿತ್ತು. ಆದರೆ, ಮುಂದಿನ ವಿಚಾರಣೆವರೆಗೆ (ಜು.14ರವರೆಗೆ) ತನಿಖಾ ವರದಿಯನ್ನು ಸಲ್ಲಿಸದಂತೆ ಎಸ್‌ಐಟಿ ಮತ್ತು ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿತ್ತು.

ಸಿ.ಡಿ. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಮತ್ತು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ವಕೀಲ ಉಮೇಶ್‌ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾ| ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದವು.

ರಾಜ್ಯ ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಮೊಮೊ ಸಲ್ಲಿಸಿ, ಪ್ರಕರಣದ ತನಿಖೆ ಮುಕ್ತಾಯಗೊಂಡಿದೆ ಹಾಗೂ ಅಂತಿಮ ತನಿಖಾ ವರದಿ ಸಿದ್ಧವಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

Latest Videos
Follow Us:
Download App:
  • android
  • ios