ಹೈಕಮಾಂಡ್ ಸೂಚನೆಯಂತೆ ಬಳ್ಳಾರಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ತೆರಳುತ್ತೇನೆ. ಆದರೆ, ‘ನಾನು ನಾಯಕ’ ಎಂದು ಮಾಧ್ಯಮಗಳ ಮುಂದೆ ಎದೆ ಉಬ್ಬಿಸಿಕೊಂಡು ಹೋದರೆ ಸಾಲದು. ಕ್ಷೇತ್ರದಲ್ಲಿ ರಂಗಕ್ಕೆ ಇಳಿದು ಪ್ರಚಾರ ನಡೆಸಬೇಕು. ಅದನ್ನು ನಾನು ಮಾಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್‌ಗೆ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಯನ್ನು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ನಾಯಕರೊಂದಿಗೆ ಸಮಾಲೋಚಿಸಿದ ನಂತರವೇ ಆಯ್ಕೆ ಮಾಡಲಾಗಿದೆ.

ಹೈಕಮಾಂಡ್ ಸೂಚನೆಯಂತೆ ನಾನು ಚುನಾವಣೆ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ಬಳ್ಳಾರಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ತೆರಳುತ್ತೇನೆ. ಆದರೆ, ‘ನಾನು ನಾಯಕ’ ಎಂದು ಮಾಧ್ಯಮಗಳ ಮುಂದೆ ಎದೆ ಉಬ್ಬಿಸಿಕೊಂಡು ಹೋದರೆ ಸಾಲದು. 

ಕ್ಷೇತ್ರದಲ್ಲಿ ರಂಗಕ್ಕೆ ಇಳಿದು ಪ್ರಚಾರ ನಡೆಸಬೇಕು. ಅದನ್ನು ನಾನು ಮಾಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದರು. ಬಳ್ಳಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದರು.