Asianet Suvarna News Asianet Suvarna News

ರಾಜ್ಯದ ಆರು ಜಿಲ್ಲೆಗಳಿಗೆ ಬಿಸಿಗಾಳಿಯ ರೆಡ್ ಅಲರ್ಟ್!

ರಾಜ್ಯದಲ್ಲಿ ಬಿಸಿ ಗಾಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 

Red alert for heat wave for six districts of the state gvd
Author
First Published May 2, 2024, 10:58 AM IST

ಬೆಂಗಳೂರು (ಮೇ.02): ರಾಜ್ಯದಲ್ಲಿ ಬಿಸಿ ಗಾಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ಬಿಸಿ ಗಾಳಿಯ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ. 

ಬಿಸಿಗಾಳಿ ಮಾನದಂಡ ಏನು?: ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ದಾಖಲಾಗುವ ಜಿಲ್ಲೆಗಳಿಗೆ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗುತ್ತಿದೆ. ವಾಡಿಕೆ ಪ್ರಮಾಣಕ್ಕಿಂತ 6.5 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿನ ಗರಿಷ್ಠ ಉಷ್ಣತೆ ದಾಖಲಾಗುವ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ 4.5 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ಬಿಸಿಲು ದಾಖಲಾಗುವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಮುನ್ನೆಚ್ಚರಿಕೆ ಕ್ರಮಗಳು: ಜನರು ಮಧ್ಯಾಹ್ನ 12 ರಿಂದ 3 ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಹೆಚ್ಚು ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು, 

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌: ಯುವತಿಯಿಂದ ದೂರು, ಎಫ್‌ಐಆರ್‌ ದಾಖಲು

ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್ ಬಳಸಿ. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವ ಟಿಕೆಬೇಡ, ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳು ಬೇಡ, ಹೆಚ್ಚಿನ ಪ್ರೋಟೀನ್ ಆಹಾರ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ ಎಂಬುದು ಸೇರಿದಂತೆ ಹಲವು ಸಲಹೆಗಳನ್ನು ಇಲಾಖೆ ನೀಡಿದೆ.

ರಣ ಬಿಸಿಲು: ಬೆಂಕಿ ಹಚ್ಚದೆ ಆಮ್ಲೆಟ್ ಮಾಡಿದ ಜನ: ಕಲ್ಯಾಣ ಕರ್ನಾಟಕಲ್ಲಿ ಬಿಸಿಲಿನ ಪ್ರತಾಪ ಜನರ ಬದುಕು ಹೈರಾಣಾಗಿಸಿದ್ದು, ಬಿಸಿಲು ಎಷ್ಟಿದೆ ಎನ್ನುವುದನ್ನು ತೋರಿಸಲು ಇಲ್ಲಿನ ಜನ ಬೆಂಕಿ ಹಚ್ಚದೆಯೇ ಕಬ್ಬಿಣದ ಕಡಾಯಿಯ ಮೇಲೆ ಮೊಟ್ಟೆಯ ಆಯ್ಲೆಟ್ ಮಾಡಿದ ಫೋಟೋ, ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಕಳೆದ 3-4 ದಿನಗಳಲ್ಲಿ ಇಲ್ಲಿ ತಾಪಮಾನ 43, 44, 45 ಹೀಗೇ ಏರುತ್ತಲೇ ಇದೆ.

ಕಲಬುರಗಿಯಲ್ಲಿ ದಶಕದ ಅತೀ ಗರಿಷ್ಠ 46.7 ಡಿಗ್ರಿ ತಾಪ: ಉಷ್ಣ ಮಾರುತಗಳಿಂದಾಗಿ ಕಂಗೆಟ್ಟಿರುವ ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ತಾಪಮಾನ ದಶಕದ ಅತೀ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಮಂಗಳವಾರವಷ್ಟೇ ಈ ಜಿಲ್ಲೆಯಲ್ಲಿ ತಾಪಮಾನ 45.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಒಂದು ದಿನದಲ್ಲಿ 1.4 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪ ಹೆಚ್ಚು ದಾಖಲಾಗಿದ್ದು, ಜಿಲ್ಲೆಯ ಜನ- ಜಾನುವಾರು ಜೀವನ ದುಸ್ಥರವಾಗಿಸಿದೆ. 

ಪ್ರಜ್ವಲ್‌ ವಿದೇಶಕ್ಕೆ ಹೋಗುವವರೆಗೂ ಕತ್ತೆ ಕಾಯುತ್ತಿದ್ದರಾ?: ಪ್ರಲ್ಹಾದ್‌ ಜೋಶಿ

ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ 4 ದಿನದಿಂದ ಉಷ್ಣ ಅಲೆಗಳು ರಾಚುತ್ತಿವೆ. ಇದರಿಂದಾಗಿ ಜನಜೀವನ ಜಿಲ್ಲಾದ್ಯಂತ ತತ್ತರಿಸಿಹೋಗಿದೆ. ಜನ ರಣ ಬಿಸಿಲಿಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೂ ಹೊರಗಡೆ ಹೋಗದೆ ನೆರಳಲ್ಲಿ ಇರುವಂತೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜಿಲ್ಲೆಯ ಜನತೆಗೆ ಮನವಿ ಮಾಡಿದೆ.

Latest Videos
Follow Us:
Download App:
  • android
  • ios