ರಾಜ್ಯದಲ್ಲಿ ಸರ್ಕಾರದಿಂದ ಆಚರಿಸಲಾಗುವ ಜಯಂತಿಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಭಾವನೆ ಇದೆ. ಶುಕ್ರವಾರ ನಡೆಯಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಭೆಯಲ್ಲಿ ಜಯಂತಿಗಳ ಸಂಖ್ಯೆ ಕಡಿಮೆಗೊಳಿಸುವ ಬಗ್ಗೆ ವಿಸ್ತೃತ ಚರ್ಚೆ
ಉಡುಪಿ (ಆ.24): ರಾಜ್ಯದಲ್ಲಿ ಸರ್ಕಾರದಿಂದ ಆಚರಿಸಲಾಗುವ ಜಯಂತಿಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಭಾವನೆ ಇದೆ.
ಶುಕ್ರವಾರ ನಡೆಯಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಭೆಯಲ್ಲಿ ಜಯಂತಿಗಳ ಸಂಖ್ಯೆ ಕಡಿಮೆಗೊಳಿಸುವ ಬಗ್ಗೆ ವಿಸ್ತೃತ ಚರ್ಚೆ ಮಾಡುತ್ತೇವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ, ಯುವಜನ ಸೇವೆ, ಶಿಕ್ಷಣ ಹಾಗೂ ಸಂಬಂಧಿತ ಇತರೆ ಇಲಾಖೆಗಳು ಒಟ್ಟಾಗಿ ಹೆಚ್ಚು ಅರ್ಥಪೂರ್ಣವಾಗಿ ಜಯಂತಿಗಳ ಆಚರಣೆ ನಡೆಸಲು ಒತ್ತು ನೀಡುತ್ತೇವೆ.
ನಾರಾಯಣಗುರುಗಳ ಹೆಸರಲ್ಲಿ ಶೀಘ್ರ ನಿಗಮ: ಸಚಿವ ಸುನೀಲ್
ಸದ್ಯ ಸ್ವಾತಂತ್ರ್ಯದ ಅಮೃತ ಮಹೋತ್ಸವವೂ ನಡೆಯುತ್ತಿದ್ದು, ಇದನ್ನೂ ಸಂಭ್ರಮದಿಂದ ಆಚರಿಸಬೇಕಿದೆ. ಜನರಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಿಸುವ ಕಾರ್ಯಕ್ರಮ ರೂಪಿಸುತ್ತೇವೆ. ಅಧಿವೇಶನದೊಳಗೆ ಈ ಕುರಿತ ರೂಪುರೇಷೆ ಅಂತಿಮಗೊಳಿಸಲಿದ್ದೇವೆ ಎಂದರು.
