ಸೋಂಕು ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಸೇವಾ ಸಿಂಧು ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಕೊಂಡು ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಬೆಂಗಳೂರು(ಮೇ 23): ಸೋಂಕು ಪ್ರಕರಣ ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಸೇವಾ ಸಿಂಧು ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಕೊಂಡು ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಅನ್ಯ ರಾಜ್ಯಗಳಿಂದ ವಾಪಸಾಗುವ ಎಲ್ಲರಿಗೂ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಹಾಗೂ 14 ದಿನಗಳ ಹೋಂ ಕ್ವಾರಂಟೈನ್‌ ವಿಧಿಸಿದ್ದ ಆದೇಶವನ್ನು ಹಿಂಪಡೆದಿದ್ದು, ಹೆಚ್ಚು ಸೋಂಕು ಪ್ರಕರಣ ಹೊಂದಿರುವ ಗುಜರಾತ್‌, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಆಗಮಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಹಾಗೂ 7 ದಿನಗಳ ಹೋಂ ಕ್ವಾರಂಟೈನ್‌ ವಿಧಿಸಲು ನಿರ್ಧರಿಸಲಾಗಿದೆ. ಉಳಿದಂತೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಅವಧಿಯಲ್ಲಿ 5 ಅಥವಾ 7ನೇ ದಿನ ಅವರನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

RBI ರೆಪೋ ದರ ಕಡಿತದ ಬೆನ್ನಲ್ಲೇ ಜೆಕೆ ಟೈಯರ್ಸ್ ಮಹತ್ವದ ಪ್ರಕಣೆ!

ಇನ್ನು ಸೋಂಕು ಹೆಚ್ಚಿರುವ ಆರು ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಆಗಮಿಸುವವರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ವಿಧಿಸಲಾಗುವುದು. ಈ ವೇಳೆ ಅವರ ಮೇಲೆ ಸ್ಥಳೀಯ ಆರೋಗ್ಯ ಸಿಬ್ಬಂದಿ ನಿಗಾ ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಯಡಿಯೂರಪ್ಪ

ಸೋಂಕು ಹೆಚ್ಚಿರುವ ರಾಜ್ಯಗಳಿಂದ ಬಂದ ಗರ್ಭಿಣಿಯರು, 80 ವರ್ಷ ಮೇಲ್ಪಟ್ಟವೃದ್ಧರು, 10 ವರ್ಷದೊಳಗಿನ ಮಕ್ಕಳು, ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರು, ವೈದ್ಯಕೀಯ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆ ಸಿಬ್ಬಂದಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ಇವರು ಹದಿನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಬಹುದು.

ಉದ್ಯಮಿಗಳಿಗಿಲ್ಲ:

ರಾಜ್ಯಕ್ಕೆ ವ್ಯಾಪಾರ, ಟೆಂಡರ್‌ ಪ್ರಕ್ರಿಯೆ ಮತ್ತಿರ ಕಾರ್ಯಗಳಿಗೆ ಬಂದು ಹೋಗುವ ಉದ್ಯಮಿಗಳು, ಪ್ರಮುಖ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ಸಾಂಸ್ಥಿಕ ಹಾಗೂ ಹೋಂ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲು ಸಹ ತೀರ್ಮಾನಿಸಲಾಗಿದೆ. ಆದರೆ, ಅವರು ಐಸಿಎಂಆರ್‌ನಿಂದ ಅಂಗೀಕೃತವಾಗಿರುವ ಪ್ರಯೋಗಾಲಯಗಳಿಂದ ಕೊರೋನಾ ಪರೀಕ್ಷೆ ಮಾಡಿಸಿದ (2 ದಿನದ ಒಳಗಿನ ವರದಿ) ನೆಗೆಟಿವ್‌ ವರದಿಯನ್ನು ಸಲ್ಲಿಸಬೇಕು.