ಕರ್ನಾಟಕಕ್ಕೆ ಹಿನ್ನಡೆ , ತಮಿಳುನಾಡಿಗೆ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಸೂಚನೆ!
ಕಾವೇರಿ ನೀರು ವಿವಾದದಲ್ಲಿ ಕರ್ನಾಟಕ್ಕೆ ಹಿನ್ನಡೆಯಾಗಿದೆ. ನಾಳೆಯಿಂದ 15 ದಿನ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ನವದೆಹಲಿ(ಆ.28) ಕಾವೇರಿ ನದಿ ನೀರು ಹಂಚಿಕೆ ಕುರಿತು ಇತ್ತೀಚೆಗೆ ಭುಗಿಲೆದ್ದ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ಮಳೆ ಕೊರತೆಯಿಂದ ಕರ್ನಾಟಕ ಬರಿದಾಗುತ್ತಿದೆ. ಇದರ ನಡುವೆ ತಮಿಳುನಾಡು ಕಾವೇರಿ ನೀರು ಬಿಡಲು ಅಸಾಧ್ಯ ಅನ್ನೋ ಕರ್ನಾಟಕ ವಾದವನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಒಪ್ಪಿಲ್ಲ. ನಾಳೆಯಿಂದ 15 ದಿನ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಇಂದು ದೆಹಲಿಯಲ್ಲಿ ನಡೆದ CWRC ಮಹತ್ವದ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ತಮಿಳುನಾಡಿಗೆ ಬಿಡುವ ನೀರಿನ ಪ್ರಮಾಣವನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಕರ್ನಾಟಕ ವಾದ ಮಂಡಿಸಿತ್ತು. ಆದರೆ CWRC ಈ ವಾದ ತಿರಸ್ಕರಿಸಿದೆ. ಇಷ್ಟೇ ಅಲ್ಲ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿದೆ. ಇದೀಗ CWRC ನಿರ್ಧಾರವನ್ನು ಕರ್ನಾಟಕ CWMA ಮುಂದೆ ಪ್ರಶ್ನಿಸಲು ನಿರ್ಧರಿಸಿದೆ. ಮಂಗಳವಾರ ದೆಹಲಿಯಲ್ಲಿ CWMA ಸಭೆ ನಡಯೆಲಿದೆ. ಈ ಸಭೆಯಲ್ಲಿ ಕರ್ನಾಟಕ ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರುವ ಬಿಡುವ ನಿರ್ಧಾರವನ್ನು ಪ್ರಶ್ನಿಸಲಿದೆ.
ಡಿಎಂಕೆ ಒತ್ತಡಕ್ಕೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್: ರಾಜೀವ್ ಚಂದ್ರಶೇಖರ್
ಕಾವೇರಿ ನೀರಿಗಾಗಿ ತಗಾದೆ ತೆಗೆದು ತಮಿಳುನಾಡು ಸುಪ್ರೀಂ ಕೋರ್ಚ್ ಸಲ್ಲಿಸಿರುವ ಅರ್ಜಿ ಇದೇ ಶುಕ್ರವಾರ ವಿಚಾರಣೆಗೆ ಬರಲಿದೆ. ಇದಕ್ಕೂ ಮೊದಲು ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ 5,000 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚಿಸಿದೆ. ದೆಹಲಿಯಲ್ಲಿ ನಡೆದ ಈ ಸಭೆಗೆ ಕರ್ನಾಟಕದಿಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಈಗಾಗಲೇ ನೀರು ನಿಯಂತ್ರಣ ಸಮಿತಿಯ ಆದೇಶದಂತೆ ಕರ್ನಾಟಕವು ತಮಿಳುನಾಡಿಗೆ 11 ದಿನಗಳಲ್ಲಿ ನಿತ್ಯ 10 ಸಾವಿರ ಕ್ಯುಸೆಕ್‌ನಂತೆ ಒಟ್ಟಾರೆ 10 ಟಿಎಂಸಿ ನೀರು ಹರಿಸಿದೆ. ಆದರೆ ತಮಿಳುನಾಡು ಮಾತ್ರ 24 ಸಾವಿರ ಕ್ಯುಸೆಕ್‌ಗಾಗಿ ಬೇಡಿಕೆ ಇಟ್ಟಿದ್ದು, ಈ ಸಂಬಂಧ ಸುಪ್ರೀಂ ಕೋರ್ಚ್‌ಗೂ ಅರ್ಜಿ ಸಲ್ಲಿಸಿದೆ.
‘ನಮ್ನೀರು, ನಮ್ಹಕ್ಕು’ ಎಂದವರು ತ.ನಾಡಿಗೆ ಬಿಟ್ಟಿದ್ದೇಕೆ?: ಎಚ್.ಡಿ.ಕುಮಾರಸ್ವಾಮಿ
ರಾಜ್ಯವು ಮಳೆ ಕೊರತೆ ಎದುರಿಸುತ್ತಿದ್ದು, ಇಂಥ ಸಂಕಷ್ಟದ ಸಮಯದಲ್ಲೂ ನಾವು ತಮಿಳುನಾಡಿಗೆ ಸಾಕಷ್ಟುನೀರು ಹರಿಸಿದ್ದೇವೆ. ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಈಗಾಗಲೇ ಸ್ಪಷ್ಟಪಡಿಸಿದೆ. ಅಲ್ಲದೆ, 15 ದಿನಗಳ ಹಿಂದೆ ಸಮಿತಿಯು ನೀಡಿದ್ದ ಆದೇಶ ಪಾಲಿಸಿರುವ ಕುರಿತು ಅಂಕಿ-ಅಂಶಗಳ ಸಮೇತ ಮಾಹಿತಿಯನ್ನೂ ನೀಡಿದೆ.
ಕಾವೇರಿಯಿಂದ ನಿತ್ಯ 24 ಸಾವಿರ ಕ್ಯುಸೆಕ್ ನೀರು ಬಿಡುಗಡೆಗೆ ನಿರ್ದೇಶನ ನೀಡಬೇಕೆಂದು ಕೋರಿ ಈಗಾಗಲೇ ತಮಿಳುನಾಡು ಸಲ್ಲಿಸಿರುವ ಅರ್ಜಿ ಸೆ.1ರಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆಗೆ ಬರಲಿದೆ.