Asianet Suvarna News Asianet Suvarna News

ಇಂದು ಮಧ್ಯಾಹ್ನ ನಟ ದರ್ಶನ್ ನ್ಯಾಯಾಲಯಕ್ಕೆ; ಅಭಿಮಾನಿಗಳು ಸೇರುವ ಹಿನ್ನೆಲೆ ಬಿಗಿ ಭದ್ರತೆ!

ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಡಿಬಾಸ್ ಅಲಿಯಾಸ್ ನಟ ದರ್ಶನ್ ಸೇರಿದಂತೆ ಇತರೆ ನಾಲ್ವರು ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ವೇಳೆ ನ್ಯಾಯಾಲಯದ ಬಳಿ ದರ್ಶನ್ ಅಭಿಮಾನಿಗಳು ಹೆಚ್ಚಾಗಿ ಸೇರುವ ಸಾಧ್ಯತೆ ಹಿನ್ನೆಲೆ ಸೂಕ್ತ ಬಂದೋಬಸ್ತ್‌ ಮಾಡಲಾಗಿದೆ.

Renuka swamy murder case kannada actor Darshan and four others went to court today rav
Author
First Published Jun 22, 2024, 10:17 AM IST

ಬೆಂಗಳೂರು (ಜೂ.22): ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಡಿಬಾಸ್ ಅಲಿಯಾಸ್ ನಟ ದರ್ಶನ್ ಸೇರಿದಂತೆ ಇತರೆ ನಾಲ್ವರು ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ವೇಳೆ ನ್ಯಾಯಾಲಯದ ಬಳಿ ದರ್ಶನ್ ಅಭಿಮಾನಿಗಳು ಹೆಚ್ಚಾಗಿ ಸೇರುವ ಸಾಧ್ಯತೆ ಹಿನ್ನೆಲೆ ಸೂಕ್ತ ಬಂದೋಬಸ್ತ್‌ ಮಾಡಲಾಗಿದೆ.

ಕೆಎಸ್ಆರ್ ಪಿ ಪೊಲೀಸ್ ಸಹಿತ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇಂದು ನ್ಯಾಯಾಲಯ ನಟ ದರ್ಶನ್‌ರನ್ನ ಮತ್ತೆ ನ್ಯಾಯಾಂಗ ಬಂಧನಕ್ಕೆ  ಆದೇಶ ನೀಡಿದ್ರೆ ಪರಪ್ಪನ ಅಗ್ರಹಾರ ಜೈಲಿನ ಬಳಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನ ಬಳಿಯೂ ಸೂಕ್ತ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. ಕಳೆದ ವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಅಭಿಮಾನಿಗಳು ದಾಂಧಲೆ ನಡೆಸಿದ್ದರು. ಕರ್ತವ್ಯನಿರತ ಓರ್ವ ಮಾಧ್ಯಮ ಪ್ರತಿನಿಧಿಯ ಮೇಲೆ ನ್ಯಾಯಾಲಯ ಆವರಣದಲ್ಲೇ ಮನಬಂದಂತೆ ಥಳಿಸಿದ ಘಟನೆ ನಡೆದಿತ್ತು. ಅಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಬಿಗಿಭದ್ರತೆ ಕೈಗೊಳ್ಳಲಿರುವ ಪೊಲೀಸರು.

ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟು ಸಾಯಿಸಿದ್ದಾರೆ; ಕೋರ್ಟ್‌ಗೆ ಸರ್ಕಾರಿ ವಕೀಲರಿಂದ ಮಾಹಿತಿ

ನ್ಯಾಯಾಲಯದ ಮುಂದೆ ಹಾಜರುಪಡಿಸಿ ಗುರುವಾರ ದರ್ಶನ್‌ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದ ಪೊಲೀಸರು. ಈ ಅವಧಿ ಮುಕ್ತಾಯವಾದ ಹಿನ್ನೆಲೆ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇನ್ನು ಹೆಚ್ಚು ದಿನ ಕಸ್ಟಡಿಗೆ ಪಡೆಯಲು ಕಾನೂನಿನಲ್ಲಿ ಅ‍ವಕಾಶವಿಲ್ಲ ಎನ್ನಲಾಗಿದೆ. ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್‌ ಪ್ರಿಯತಮೆ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳು ಸೆರೆಮನೆ ವಾಸ ಶುರುವಾಗಿದೆ. ಹೀಗಾಗಿ ಬಾಕಿ ಉಳಿದಿರುವ ದರ್ಶನ್ ಸೇರಿ ನಾಲ್ವರು ಸಹ ಶನಿವಾರ ಸಂಜೆ ವೇಳೆಗೆ ಪೊಲೀಸ್ ಠಾಣೆಯ ಲಾಕಪ್‌ನಿಂದ ಸೆಂಟ್ರಲ್ ಜೈಲ್‌ನ ಕತ್ತಲ ಕೋಣೆಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಾಲಯ, ಪರಪ್ಪನ ಅಗ್ರಹಾರ ಜೈಲಿನ ಸುತ್ತ ಸೇರುವ ಸಾಧ್ಯತೆಯಿದೆ.

ಇನ್‌ಸ್ಟಾಗ್ರಾಂನಲ್ಲಿ ತಮ್ಮ ಪ್ರಿಯತಮೆ ಪವಿತ್ರಾಗೌಡ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಎಂಬಾತನನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಂದು ಮೋರಿಗೆ ಎಸೆದಿದ್ದ ಡಿಗ್ಯಾಂಗ್. ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 16 ರನ್ನು ಬಂಧಿಸಲಾಗಿತ್ತು. ಇಂದು ದರ್ಶನ್‌ನ ಮುಂದಿನ ಭವಿಷ್ಯ ತಿಳಿಯಲಿದೆ.

ನಟ ದರ್ಶನ್‌ಗೆ ಶುರುವಾಯ್ತು ಶೇಕ್; ರೇಣುಕಾಸ್ವಾಮಿ ಕೇಸಿನ ವಾದಕ್ಕೆ ಬಂದ ವಕೀಲರ ಹಿನ್ನೆಲೆ ಕೇಳಿ ಶಾಕ್

 ಮೆಡಿಕಲ್ ಟೆಸ್ಟ್:

ಇಂದು ಕಸ್ಟಡಿ ಕೊನೆ ದಿನ. ಮಧ್ಯಾಹ್ನದ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಪೊಲೀಸರು. ಹೀಗಾಗಿ ನ್ಯಾಯಾಲಯಕ್ಕೆ ಕರೆದೊಯ್ಯುವ ಮುನ್ನ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲಿದ್ದಾರೆ. ಆರೋಪಿಗಳಾದ ನಟ ದರ್ಶನ್, ಪ್ರದೂಶ್, ವಿನಯ್, ಧನರಾಜ್  ಸೇರಿ ನಾಲ್ವರಿಗೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿಯೇ ಮೆಡಿಕಲ್ ಟೆಸ್ಟ್. ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆ ವೈದ್ಯರಿಂದ ಮೆಡಿಕಲ್‌ ಟೆಸ್ಟ್ ಮಾಡಿಸಿದ ಬಳಿಕ ಮಧ್ಯಾಹ್ನ ಕೋರ್ಟ್ ಗೆ ಕರೆದೊಯ್ಯಲಿರುವ ಪೊಲೀಸರು.

Latest Videos
Follow Us:
Download App:
  • android
  • ios