Asianet Suvarna News Asianet Suvarna News

ನಟ ದರ್ಶನ್‌ನಿಂದ ಇನ್ನಷ್ಟು ಕೊಲೆಯಾಗಿರಬಹುದು; ಸಮಗ್ರ ತನಿಖೆಗೆ ಬಿಜೆಪಿ ಆಗ್ರಹ

ದರ್ಶನ್ ನ ಮ್ಯಾನೇಜರ್ ಕಣ್ಮರೆಯಾಗಿದ್ದಾರೆ.  ಮ್ಯಾನೇಜರ್ ನನ್ನು ಏನೋ ಮಾಡಿ ಈ ರೀತಿ ಲೆಟರ್ ಇವರೇ ಬರೆದಿಟ್ಟು ಮರ್ಡರ್ ಮಾಡಿರುವ ಸಂಶಯವಿದೆ. ಹೀಗಾಗಿ ದರ್ಶನ್ ವಿರುದ್ಧ ಸೂಕ್ತ ತನಿಖೆಯಾಗಬೇಕೆಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ. 

Renuka Swamy murder case Kodagu BJP demands comprehensive investigation against actor Darshan rav
Author
First Published Jun 17, 2024, 5:14 PM IST

ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಜೂ.17): ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲಿ ಕೊಡೆ ಹಿಡಿದಂತೆ ನಟ ದರ್ಶನ್‌ಗೆ ಅದೇ ಆಗಿದೆ. ದರ್ಶನ್ ಒಬ್ಬ ಅತ್ಯಂತ ದುರಹರಂಕಾರದ ವ್ಯಕ್ತಿಯಾಗಿದ್ದಾನೆ. ಆತ ಇದೊಂದೇ ಕೊಲೆಯಲ್ಲ, ಇನ್ನಷ್ಟು ಕೊಲೆ ಮಾಡಿರುವ ಅನುಮಾನವಿದೆ. ಬೇರೆಯ ಕೊಲೆಯನ್ನೂ ಮಾಡಿರುವ ಸಾಧ್ಯತೆ ಇದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ತನಿಖೆಯಾಗಲಿ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. 

ದರ್ಶನ್ ನ ಮ್ಯಾನೇಜರ್ ಕಣ್ಮರೆಯಾಗಿದ್ದಾರೆ. ಆದರೆ ಅವರು 10 ಕೋಟಿ ಮಿಸ್ ಯೂಸ್ ಮಾಡಿದ್ದಾರೆ. ಹೀಗಾಗಿ ಲೆಟರ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ ಎಂದು ದರ್ಶನ್ ಹೇಳಿದ್ದಾರೆ. ಆದರೆ ಇವರೇ ಮ್ಯಾನೇಜರ್ ನನ್ನು ಏನೋ ಮಾಡಿ ಈ ರೀತಿ ಲೆಟರ್ ಇವರೇ ಬರೆದಿಟ್ಟು ಹೀಗೆ ಇವರೆ ಮರ್ಡರ್ ಮಾಡಿರುವ ಸಂಶಯವಿದೆ. ಹೀಗಾಗಿ ದರ್ಶನ್ ವಿರುದ್ಧ ಸೂಕ್ತ ತನಿಖೆಯಾಗಬೇಕೆಂದು ಅಪ್ಪಚ್ಚು ರಂಜನ್ ಮಡಿಕೇರಿಯಲ್ಲಿ ಒತ್ತಾಯಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣ: ರಹಸ್ಯ ಬಿಡಿಸಲು ಡಿ ಗ್ಯಾಂಗ್‌ಗೆ ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್ ಕೊಟ್ಟಿದ್ದ ಪೊಲೀಸರು!

ಕಾಂಗ್ರೆಸ್ ಒಂದು ಭ್ರಷ್ಟ ಸರ್ಕಾರವಾಗಿರುವುದರ ಜೊತೆಗೆ ಇದೊಂದು ಕೊಲೆಗಡುಕ ಸರ್ಕಾರ. ಕಾಂಗ್ರೆಸ್ ಆಡಳಿತದಲ್ಲೇ 477 ಮರ್ಡರ್, 200 ರೇಪ್  ಕೇಸ್ ಆಗಿವೆ. ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕುಸಿತವಾಗಿದೆ. ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸೋತಿದೆ. ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣಕ್ಕೂ ಮುಂದುವರೆಯಬಾರದು. ಕಾಂಗ್ರೆಸ್ ನಾಯಕರು ಸ್ವತಃ ತಾವೇ ರಾಜೀನಾಮೆ ಕೊಡಬೇಕು ಎಂದು ಮಡಿಕೇರಿಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ. 

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ಸುಂಕ ಏರಿಸಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ವಿನೂತನ ಪ್ರತಿಭಟನೆ ನಡೆಯಿತು. ನಗರಸಭೆ ಕಚೇರಿ ಬಳಿಯಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆ ಬಳಿಯಿಂದ ನಗರ ಜನರಲ್ ತಿಮ್ಮಯ್ಯ ವೃತ್ತದವರೆಗೆ ಕಾರನ್ನು ಎಳೆದರು. ಜೊತೆಗೆ ಸೈಕಲ್ ಏರಿ ಸೈಕಲ್ ಓಡಿಸುವ ಮೂಲಕ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿದರು. 

ವಿರಾಜಪೇಟೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ ಸೇರಿದಂತೆ ಬಿಜೆಪಿಯ ಪ್ರಮುಖರು ಸೈಕಲ್ ಏರಿ ಕಾಂಗ್ರೆಸ್ ಸರ್ಕಾರದ ಆಕ್ರೋಶ ಹೊರಹಾಕಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಬಡವರ ಪರವಾಗಿ ಇದ್ದೇವೆ ಎನ್ನುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ಬಡವರಿಗೆ ದ್ರೋಹ ಬಗೆಯುತ್ತಿದೆ ಎಂದಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಕಚ್ಚಾ ತೈಲ ಬೆಲೆ ತುಂಬಾ ಕಡಿಮೆ ಇದೆ. ಬೇರೆ ಬೇರೆ ರಾಜ್ಯಗಳಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ. ಆದರೆ ಸಿದ್ದರಾಮಯ್ಯ ಅವರು ಇಲ್ಲಿ ಅವುಗಳ ಬೆಲೆ ಜಾಸ್ತಿ ಮಾಡಿ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದಿದ್ದಾರೆ. 

ಡಿ'ಗ್ಯಾಂಗ್‌ನ ಒಬ್ಬೊಬ್ಬ ಆರೋಪಿಯದೂ ಒಂದೊಂದು ಅವತಾರ: ದರ್ಶನ್ ಜತೆ ಬಂಧಿತರ ವಿಸ್ತೃತ ಮಾಹಿತಿ

ಈ ಕುರಿತು ಮಾತನಾಡಿರುವ ಮಾಜಿ ಸ್ಪೀಕರ್, ವಿರಾಜಪೇಟೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಅವರು ಯಾರೂ ನಿರೀಕ್ಷಿಸದ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಂದ ಲೂಟಿ ಹೊಡೆಯಲು ಮುಂದಾಗಿದೆ. ಹೀಗಾಗಿ ಕರ್ನಾಟಕ ರಾಜ್ಯಕ್ಕೆ ಜೂನ್ 15 ಕರಾಳ ದಿನ ಎಂದೇ ಹೇಳಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Latest Videos
Follow Us:
Download App:
  • android
  • ios